ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಯಲ್ಲಿ ವರುಣನ ಆರ್ಭಟ: ಶಾಲೆಗಳಿಗೆ ಮಾತ್ರ ರಜೆ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಮೇ 29 : ಗಲ್ಫ್ ರಾಷ್ಡ್ರಗಳಲ್ಲಿ ಬೆಚ್ಚಿ ಬೀಳಿಸಿದ್ದ ಮೆಕ್ನು ಚಂಡಮಾರುತ ಕರಾವಳಿಯಲ್ಲೂ ಕಳೆದ ಮೂರು ದಿನಗಳಿಂದ ಜನರ ನಿದ್ದೆಗೆಡಿಸಿದೆ. ಇಂದು ಬೆಳಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣ ಇದ್ದು, ಮಳೆಯಾಗುತ್ತಲೇ ಇದೆ.

ಉಡುಪಿಯಲ್ಲಿ ಬಿರುಗಾಳಿ ಮಳೆಗೆ ಮರಗಳು, ವಿದ್ಯುತ್ ಕಂಬಗಳು ಧರೆಗೆಉಡುಪಿಯಲ್ಲಿ ಬಿರುಗಾಳಿ ಮಳೆಗೆ ಮರಗಳು, ವಿದ್ಯುತ್ ಕಂಬಗಳು ಧರೆಗೆ

ಜಿಲ್ಲೆಯಾದ್ಯಾಂತ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಉಡುಪಿ ನಗರಗಳ ಹಲವು ಕಡೆ ಮನೆಗಳು ಮುಳುಗಡೆಯಾಗಿವೆ. ಬೆಳಗ್ಗೆಯಿಂದ ಮಳೆ ಎಡಬಿಡದೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ. ಬಹುತೇಕ ರಸ್ತೆಗಳು ಮುಳುಗಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.

In Pics: ಮಳೆಯ ರುದ್ರನರ್ತನಕ್ಕೆ ನಲುಗಿದ ದಕ್ಷಿಣ ಕನ್ನಡ, ಉಡುಪಿ

Holidays have been announced to school in udupi

ಮುನ್ನೆಚ್ಚರಿಕಾ ಕ್ರಮವಾಗಿ 2 ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಂಗಳವಾರ ಹಾಗೂ ಬುಧವಾರ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಈ ನಡುವೆ ನಾಳೆ ಕರ್ನಾಟಕ ಕರಾವಳಿಗೆ ಮುಂಗಾರು ಪ್ರವೇಶ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

English summary
In Udupi rainfall is coming from today morning and holidays have been announced to school. Udupi people suffered heavy losses due to heavy rains.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X