ಮಣಿಪಾಲದ ಕೆಎಂಸಿ ಆವರಣದಲ್ಲಿ ಉರುಳಿದ ಮರ; ತಪ್ಪಿದ ಭಾರೀ ಅನಾಹುತ
ಉಡುಪಿ ಜೂನ್ 22: ಮಣಿಪಾಲದ ಕೆಎಂಸಿ ಆಸ್ಪತ್ರೆಯ ಆವರಣದಲ್ಲಿ ಬೃಹತ್ ಮರವೊಂದು ಏಕಾಏಕಿ ಉರುಳಿಬಿದ್ದಿದ್ದು, ಘಟನೆಯಲ್ಲಿ ಮರದಡಿ ವಿಶ್ರಾಂತಿ ಪಡೆಯುತ್ತಿದ್ದ ಇಬ್ಬರು ಗಾಯ ಗೊಂಡಿದ್ದಾರೆ. ಮರದಡಿ ನಿಲ್ಲಿಸಿದ್ದ 4 ಕಾರುಗಳು ಜಖಂಗೊಂಡಿವೆ.
ಉಡುಪಿಯಲ್ಲಿ ಮಳೆ ಗಾಳಿ ಇಲ್ಲದಿದ್ದರೂ ಕೆಎಂಸಿ ಆಸ್ಪತ್ರೆಯ ಆವರಣದಲ್ಲಿ ಈ ಬೃಹತ್ ಮರ ಉರುಳಿ ಬಿದ್ದಿದೆ. ಆಸ್ಪತ್ರೆಯ ಕಟ್ಟಡದ ಮೇಲೆ ಮರದ ಕೊಂಬೆಗಳು ಬಿದ್ದಿದ್ದು, ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ.

ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಅಧಿಕಾರಿಗಳು ದೌಡಾಯಿಸಿ ಮರ ಕತ್ತರಿಸಿ ಕಾರುಗಳನ್ನು ತೆರವುಗೊಳಿಸಿದ್ದಾರೆ.












Click it and Unblock the Notifications