ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಷ್ಕರ ಮಾಡದಂತೆ ನನ್ನನ್ನು ಕೂಡಿ ಹಾಕಲಾಗಿತ್ತು; ಉಡುಪಿ KSRTC ಮೆಕ್ಯಾನಿಕ್ ಅಳಲು

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಏಪ್ರಿಲ್ 7: ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನಿಗಮದ ನೌಕರರು ಬುಧವಾರ ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದರು.

ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ಮುಷ್ಕರ ನಡೆಸುತ್ತಿದ್ದರೆ, ಇತ್ತ ಉಡುಪಿಯಲ್ಲಿ ಕೆಎಸ್‌ಆರ್‌ಟಿಸಿ ಮೆಕ್ಯಾನಿಕ್ ಒಬ್ಬರನ್ನು ಕೂಡಿ ಹಾಕಲಾಗಿತ್ತು ಎಂಬ ಆರೋಪ ಕೇಳಿಬಂದಿದೆ.

ಕರ್ನಾಟಕ ಬಸ್ ಮುಷ್ಕರ: ವಿವಿಧ ಜಿಲ್ಲೆಗಳ ಪರಿಸ್ಥಿತಿ ಏನು?ಕರ್ನಾಟಕ ಬಸ್ ಮುಷ್ಕರ: ವಿವಿಧ ಜಿಲ್ಲೆಗಳ ಪರಿಸ್ಥಿತಿ ಏನು?

ಈ ಕುರಿತು ತಮ್ಮ ಅಳಲನ್ನು ತೋಡಿಕೊಳ್ಳುವ ಮೂಲಕ ಮೆಕ್ಯಾನಿಕ್ ಗಮನ ಸೆಳೆದಿದ್ದಾರೆ. ಇವರು ಉಡುಪಿ ಡಿಪೋದಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದು, ನನ್ನನ್ನು ಡಿಪೋ ಮ್ಯಾನೇಜರ್ ಕೂಡಿಹಾಕಿದ್ದು, ಮುಷ್ಕರ ನಡೆಸಲು ಕೂಡ ಬಿಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

Udupi: I Was Locked Inside Room To Avoid Involve In Bus Strike; KSRTC Mechanic

""ನಮಗೆ ಪ್ರತಿಭಟನೆ ಮಾಡಲು ಬಿಡುತ್ತಿಲ್ಲ. ನನ್ನನ್ನು ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್ ಕೂಡಿ ಹಾಕಿದ್ದಾರೆ. ನಾನು ಬಡವ, ಕಾಸಿದ್ದರೆ ಎಂಎಲ್ಎ ಆಗುತ್ತಿದ್ದೆ, ಮೆಕ್ಯಾನಿಕ್ ಆಗಿದ್ದೇನೆ. ನಮ್ಮ ಕಷ್ಟ ಅರ್ಥ ಮಾಡಿಕೊಂಡು ಸಂಬಳ ಹೆಚ್ಚಿಸಿ'' ಎಂದು ಉಡುಪಿಯ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಶ್ರೀಕಾಂತ್ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿ ಕಣ್ಣೀರಿಟ್ಟಿದ್ದಾರೆ.

Recommended Video

ನಿಲ್ಲದ ಮಹಾಮಾರಿ ಸವಾರಿ.. ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ | Oneindia Kannada

English summary
It is alleged that a KSRTC mechanic had been locked inside room, to avoid involve in Bus Strike in Udupi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X