ತುಳು ಮಾನ್ಯತೆಗಾಗಿ ಸಂಸತ್‌ನಲ್ಲಿ ಮಾತನಾಡುತ್ತೇನೆ; ಶೋಭಾ ಕರಂದ್ಲಾಜೆ
ಉಡುಪಿ, ಜೂನ್ 21: "ತುಳು ಭಾಷೆಗೆ ಸಂವಿಧಾನದ ಮಾನ್ಯತೆ ಸಿಗಬೇಕು. ಸಂಸತ್ತಿನಲ್ಲೂ ನಾನು ಈ ಕುರಿತು ಮಾತನಾಡಿದ್ದೇನೆ. ಆದರೆ ತುಳುರಾಜ್ಯ ಎಂಬ ಕುಚೋದ್ಯದ ಬೇಡಿಕೆಗೆ ನಮ್ಮ ಬೆಂಬಲ ಇಲ್ಲ,'' ಎಂದು ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, "ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ಮಾತನಾಡಿದ್ದಾರೆ.''
"ಗೃಹ ಸಚಿವ ಅಮಿತ್ ಶಾ ಅವರನ್ನು ನಾನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ. ತುಳುವನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಏನೆಲ್ಲ ಮಾಡಬೇಕು ಆ ಪ್ರಯತ್ನ ಮಾಡುತ್ತೇವೆ,'' ಎಂದರು.

"ನಾವು ಕರ್ನಾಟಕದವರು, ತುಳುರಾಜ್ಯ ಎಂಬ ಕುಚೋದ್ಯದ ಬೇಡಿಕೆ ಮತ್ತು ಆಶಯಗಳಿಗೆ ನಮ್ಮ ಯಾವುದೇ ಬೆಂಬಲ ಇಲ್ಲ. ಕರ್ನಾಟಕ ಏಕೀಕರಣವಾದ ಮೇಲೆ ನಾವೆಲ್ಲ ಒಟ್ಟಾಗಿ ಇರಬೇಕಾದವರು. ಒಡಕಿನ ಮಾತುಗಳನ್ನು ಮಹಾರಾಷ್ಟ್ರ ದುರುಪಯೋಗ ಮಾಡುವ ಸಾಧ್ಯತೆ ಇದೆ. ತುಳುನಾಡು ಎಂಬ ಬೇಡಿಕೆ ಸರಿಯಲ್ಲ. ಕರ್ನಾಟಕದಲ್ಲಿ ತುಳು ಭಾಷೆಗೆ ಗೌರವ ಸಿಗಬೇಕು. ತುಳು ಭಾಷೆಗಾಗಿ ನಮ್ಮ ಹೋರಾಟ ಇದೆ,'' ಎಂದು ಇದೇ ವೇಳೆ ತಿಳಿಸಿದರು.












Click it and Unblock the Notifications