ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಳು ಮಾನ್ಯತೆಗಾಗಿ ಸಂಸತ್‌ನಲ್ಲಿ ಮಾತನಾಡುತ್ತೇನೆ; ಶೋಭಾ ಕರಂದ್ಲಾಜೆ

|
Google Oneindia Kannada News

ಉಡುಪಿ, ಜೂನ್ 21: "ತುಳು ಭಾಷೆಗೆ ಸಂವಿಧಾನದ ಮಾನ್ಯತೆ ಸಿಗಬೇಕು. ಸಂಸತ್ತಿನಲ್ಲೂ ನಾನು ಈ ಕುರಿತು ಮಾತನಾಡಿದ್ದೇನೆ. ಆದರೆ ತುಳುರಾಜ್ಯ ಎಂಬ ಕುಚೋದ್ಯದ ಬೇಡಿಕೆಗೆ ನಮ್ಮ ಬೆಂಬಲ ಇಲ್ಲ,'' ಎಂದು ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, "ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ಮಾತನಾಡಿದ್ದಾರೆ.''

ತುಳುನಾಡು, ಅಧಿಕೃತ ಭಾಷೆ ಸ್ಥಾನಮಾನ ಬೇಡಿಕೆಯ ಇತಿಹಾಸ: ಇಲ್ಲಿದೆ ವಿವರತುಳುನಾಡು, ಅಧಿಕೃತ ಭಾಷೆ ಸ್ಥಾನಮಾನ ಬೇಡಿಕೆಯ ಇತಿಹಾಸ: ಇಲ್ಲಿದೆ ವಿವರ

"ಗೃಹ ಸಚಿವ ಅಮಿತ್ ಶಾ ಅವರನ್ನು ನಾನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ. ತುಳುವನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಏನೆಲ್ಲ ಮಾಡಬೇಕು ಆ ಪ್ರಯತ್ನ ಮಾಡುತ್ತೇವೆ,'' ಎಂದರು.

Udupi: I Will Speak In Parliament For Tulu Accreditation; MP Shobha Karandlaje

Recommended Video

Mysuru ಬಿಟ್ಟಮೇಲೂ Rohini sindhuriಗೆ ಎದುರಾಯ್ತು ಮತ್ತೊಂದು ಸಂಕಷ್ಟ | Oneindia Kannada

"ನಾವು ಕರ್ನಾಟಕದವರು, ತುಳುರಾಜ್ಯ ಎಂಬ ಕುಚೋದ್ಯದ ಬೇಡಿಕೆ ಮತ್ತು ಆಶಯಗಳಿಗೆ ನಮ್ಮ ಯಾವುದೇ ಬೆಂಬಲ ಇಲ್ಲ. ಕರ್ನಾಟಕ ಏಕೀಕರಣವಾದ ಮೇಲೆ ನಾವೆಲ್ಲ ಒಟ್ಟಾಗಿ ಇರಬೇಕಾದವರು. ಒಡಕಿನ ಮಾತುಗಳನ್ನು ಮಹಾರಾಷ್ಟ್ರ ದುರುಪಯೋಗ ಮಾಡುವ ಸಾಧ್ಯತೆ ಇದೆ. ತುಳುನಾಡು ಎಂಬ ಬೇಡಿಕೆ ಸರಿಯಲ್ಲ. ಕರ್ನಾಟಕದಲ್ಲಿ ತುಳು ಭಾಷೆಗೆ ಗೌರವ ಸಿಗಬೇಕು. ತುಳು ಭಾಷೆಗಾಗಿ ನಮ್ಮ ಹೋರಾಟ ಇದೆ,'' ಎಂದು ಇದೇ ವೇಳೆ ತಿಳಿಸಿದರು.

English summary
Udupi- Chikkamagaluru MP Shobha Karandlaje said Tulu language should get constitutional recognition.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X