ಹಿಂದುಳಿದ ವರ್ಗಗಳ ದನಿಯಾಗಿ ಕೆಲಸ ಮಾಡುತ್ತೇನೆ: ಜಯಪ್ರಕಾಶ್ ಹೆಗ್ಡೆ

ಉಡುಪಿ, ನವೆಂಬರ್ 24: ಅಧಿಕಾರ ಇಲ್ಲದಿದ್ದಾಗಲೂ ನಾನು ಜನರ ಜೊತೆಗೆ ಇದ್ದೆ. ಹುದ್ದೆಯಲ್ಲಿ ಇಲ್ಲದಿದ್ದರೂ ಕೆಲಸ ಮಾಡುವ ಶಕ್ತಿಯನ್ನು ಬೆಳೆಸಿಕೊಂಡಿದ್ದೇನೆ. ಜನರ ಕೆಲಸ ಮಾಡಲು ಹುದ್ದೆಯೇ ಬೇಕಾಗಿಲ್ಲ ಎಂದು ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿ ನೇಮಕಗೊಂಡಿರುವ ಜಯಪ್ರಕಾಶ್ ಹೆಗ್ಡೆ ಹೇಳಿದರು.

ಒಂದು ಪಕ್ಷದ ಪ್ರತಿನಿಧಿಯಾಗಿ ನಾನು ನೇಮಕವಾಗಿಲ್ಲ, ಪಕ್ಷ ರಹಿತವಾಗಿ ಹಿಂದುಳಿದ ವರ್ಗಗಳ ದನಿಯಾಗಿ ಕೆಲಸ ಮಾಡುತ್ತೇನೆ ಎಂದು ಹಿಂದುಳಿದ ವರ್ಗಗಳ ನೂತನ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.

ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಜಯಪ್ರಕಾಶ್ ಹೆಗ್ಡೆ ಅವರು, ರಾಜಕೀಯ ಕೆಲಸಗಳನ್ನು ಶಾಸಕನಾಗಿ, ಮಂತ್ರಿಯಾಗಿ, ಸಂಸದನಾಗಿ ಮಾಡಿದ್ದೇನೆ. ಈಗ ರಾಜಕೀಯೇತರವಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತೇನೆ ಎಂದರು.

I Will Work For Backward Classes: Jayaprakash Hegde

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ನೇಮಕ ಮಾಡಿದ್ದಾರೆ. ಸಮಿತಿಯ ಸದಸ್ಯರ ನೇಮಕಾತಿ ಮುಂದೆ ಆಗಲಿದೆ. ಈ ಹಿಂದಿನ ಎಲ್ಲಾ ವರದಿಗಳನ್ನು ಅಧ್ಯಯನ ಮಾಡುತ್ತೇನೆ. ರಾಜ್ಯಾದ್ಯಂತ ಪ್ರವಾಸ ಮಾಡಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುತ್ತೇನೆ ಎಂದು ಇದೇ ವೇಳೆ ಮಾತನಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+