ಹೂಳೆತ್ತುವ ನೆಪದಲ್ಲಿ ಕೋಟ್ಯಂತರ ಮೌಲ್ಯದ ಮರಳು ಲೂಟಿ: ಕಾಂಗ್ರೆಸ್ ಆರೋಪ
ಉಡುಪಿ, ಮೇ 27: ಉಡುಪಿಯ ಸ್ವರ್ಣ ನದಿಯಿಂದ ಹೂಳೆತ್ತುವ ನೆಪದಲ್ಲಿ ಕೋಟ್ಯಂತರ ಮೌಲ್ಯದ ಮರಳು ದೋಚಲಾಗಿದೆ. ಎಡಿಸಿ ಸೇರಿದಂತೆ 14 ಜನರ ಸಮಿತಿ ಅಕ್ರಮ ಮಾಡಿದೆ ಎಂದು ಉಡುಪಿಯ ಬ್ಲಾಕ್ ಕಾಂಗ್ರೆಸ್ ಸಮಿತಿ ಗಂಭೀರ ಆರೋಪ ಮಾಡಿದೆ.
Recommended Video
ಬ್ಲ್ಯಾಕ್ ಲಿಸ್ಟ್ ನಲ್ಲಿರುವ ಯೋಜಕ್ ಕಂಪನಿಗೆ ಟೆಂಡರ್ ನೀಡಲಾಗಿದೆ. ಡ್ಯಾಂನ ಹೂಳು ತೆಗೆಯುವ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಲಾಗಿದೆ.
ಸ್ವರ್ಣಾ ನದಿ ಉಡುಪಿಯ ಜೀವನದಿ. ಇಲ್ಲಿ ಹೂಳೆತ್ತುವ ನೆಪದಲ್ಲಿ ಕೋಟ್ಯಂತರ ಮೌಲ್ಯದ ಮರಳನ್ನು ತೆಗೆಯಲಾಗಿದೆ. ಈ ಮರಳನ್ನು ಹಿರಿಯಡ್ಕ ವ್ಯಾಪ್ತಿಯ ಕಾಡುಗಳಲ್ಲಿ ಅಕ್ರಮ ದಾಸ್ತಾನು ಮಾಡಲಾಗಿದೆ. ಬಹುಕೋಟಿ ಅಕ್ರಮದ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಯಾವುದೇ ಕ್ರಮ ಕೈಗೊಂಡಿಲ್ಲ. ಶಾಸಕ ರಘುಪತಿ ಭಟ್, ಲಾಲಾಜಿ ಮೆಂಡನ್ ಕೂಡಲೇ ಈ ಕುರಿತು ಉತ್ತರಿಸಬೇಕು. ಅಕ್ರಮದಲ್ಲಿ ಶಾಮೀಲಾದವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು.

ಈ ಸಂಬಂಧ ಎಸಿಬಿ, ಲೋಕಾಯುಕ್ತಕ್ಕೂ ದೂರು ನೀಡಿದ್ದೇವೆ. ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ.












Click it and Unblock the Notifications