ಮಂಗಳೂರು ಸ್ಪೋಟಕ ಪ್ರಕರಣ ನಿಷ್ಪಕ್ಷಪಾತ ತನಿಖೆ ಎಂದ ಬೊಮ್ಮಾಯಿ
ಮಂಗಳೂರು, ಜನವರಿ 26: ಆದಿತ್ಯರಾವ್ ಮಂಗಳೂರು ವಿಮಾನ ನಿಲ್ದಾಣಕ್ಕೆ ಸ್ಪೋಟಕ ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯನ್ನು ಟೀಕೆ ಮಾಡಲು ಯಾವುದೇ ಕಾರಣಗಳೂ ಇಲ್ಲ. ಯಾರೇ ತಪ್ಪಿತಸ್ಥರಾದರೂ ನ್ಯಾಯ ಸಮ್ಮತ, ನಿಷ್ಪಕ್ಷಪಾತ ತನಿಖೆ ಮಾಡುತ್ತೇವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
ಉಡುಪಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಪ್ರಕರಣದ ಕುರಿತು ನಾನು ಮೊದಲ ದಿನವೇ ಹೇಳಿದ್ದೇನೆ, ಯಾವುದೇ ಸಂಘಟನೆ ಅಥವಾ ವ್ಯಕ್ತಿಯ ಮೇಲೂ ನಾನು ದೋಷಾರೋಪ ಮಾಡಿರಲಿಲ್ಲ. ಪೊಲೀಸರ ತನಿಖೆಗೆ ಹೆದರಿಯೇ ಆದಿತ್ಯರಾವ್ ಶರಣಾಗಿದ್ದಾನೆ ಎಂದು ತಿಳಿಸಿದರು.
ಬಾಂಬ್ ಪ್ರಕರಣದಲ್ಲಿ ನಿಷ್ಪಕ್ಷಪಾತ ಮತ್ತು ದಕ್ಷತೆಯಿಂದ ತನಿಖೆಯಾಗಿದ್ದರಿಂದಲೇ ಆರೋಪಿ ಪತ್ತೆಯಾಗಿದ್ದಾನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಅಪರಾಧ ಅಪರಾಧವೇ, ಅಪರಾಧಿ ಅಪರಾಧಿಯೇ ಅನ್ನೋದು ನಮ್ಮ ನಂಬಿಕೆ. ಈ ವಿಷಯದಲ್ಲಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಯಾರೂ ಮಾಡಬಾರದು ಎಂದು ಮನವಿ ಮಾಡಿದರು.

ಸಚಿವ ಸಂಪುಟ ಗೊಂದಲ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಎಲ್ಲಾ ವಿಚಾರ ಮುಖ್ಯಮಂತ್ರಿಗಳ ಗಮನದಲ್ಲಿದೆ. ಸಿಎಂ ಯಡಿಯೂರಪ್ಪನವರು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು. ಸಚಿವ ಸಂಪುಟ ವಿಸ್ತರಣೆಯ ಸಂಪೂರ್ಣ ಅಧಿಕಾರ ಸಿಎಂ ಅವರಿಗಿದೆ. ವರಿಷ್ಠರ ಜೊತೆಗೆ ಚರ್ಚೆ ಮಾಡಿದ ನಂತರ ಅಂತಿಮ ನಿರ್ಧಾರಕ್ಕೆ ಬರುತ್ತಾರೆ.
ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ಸಿಕ್ಕಿದ್ದಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದರು. ಅಸ್ಪೃಶ್ಯತೆ ದೂರ ಮಾಡಿದವರಲ್ಲಿ ಪೇಜಾವರ ಸ್ವಾಮೀಜಿ ಪ್ರಮುಖರು. ಅವರೊಬ್ಬ ಶಾಂತಿಧೂತ. ಅವರ ವಿಚಾರಗಳಿಗೆ ಗೌರವ ಕೊಟ್ಟು, ಶ್ರೀಗಳ ಮಾರ್ಗದಲ್ಲಿ ನಡೆಯೋಣ ಎಂದರು.
ಬಿಜೆಪಿ ದೇಶಾದ್ಯಂತ ಸಿಎಎ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ ಎಂದ ಸಚಿವರು, ನಾಳೆ ರಾಜನಾಥ್ ಸಿಂಗ್ ಮಂಗಳೂರಿಗೆ ಬರ್ತಿದ್ದಾರೆ. ಮಂಗಳೂರು ಹೊರವಲಯದಲ್ಲಿ ಜಾಗೃತಿ ಸಮಾವೇಶ ನಡೆಯುವುದರಿಂದ, ಶಾಂತಿ, ಕಾನೂನು ಸುವ್ಯವಸ್ಥೆಗೆ ನಮ್ಮ ಇಲಾಖೆ ಎಲ್ಲಾ ಕ್ರಮ ಕೈಗೊಂಡಿದೆ ಎಂದು ಹೇಳಿದರು.
-
ಬಾಗಲಕೋಟೆಗೆ ಸಿದ್ದರಾಮಯ್ಯ ದ್ರೋಹ ಮಾಡಿದ್ರೆ ಪಕ್ಷ ಮತ್ತೆ ಗೆಲ್ಲುತ್ತಿತ್ತೇ? ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್ ತಿರುಗೇಟು -
Janhvi Kapoor: ಅಶ್ಲೀಲ ವೆಬ್ಸೈಟ್ನಲ್ಲಿ ನನ್ನ ಫೋಟೋ ನೋಡಿದ್ದೆ: ಹದಿಹರೆಯದ ಕಹಿ ಘಟನೆ ಬಿಚ್ಚಿಟ್ಟ ನಟಿ ಜಾನ್ವಿ ಕಪೂರ್ -
'By Election: ಕಾಂಗ್ರೆಸ್ನಿಂದ ವೀರಶೈವ ಲಿಂಗಾಯತರನ್ನು ಒಡೆಯುವ ಪ್ರಯತ್ನ'' -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications