ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಏಪ್ರಿಲ್ 5: ಉಡುಪಿ ಜಿಲ್ಲೆಯ ಕಾಂಗ್ರೆಸ್ ಮುಖಂಡನ ಮನೆ ಮೇಲೆ ಗುರುವಾರ ಸಂಜೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಟ್ಟೆ ಗುಡ್ಡೆ ಸದಾಶಿವ್ ಅಮೀನ್ ಎಂಬುವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಉಡುಪಿ ತಾಲೂಕಿನ‌ ಉದ್ಯಾವರ ಗ್ರಾಮದ ನಿವಾಸಿ ಸದಾಸಿವ್ ಅಮೀನ್ ಫೈನಾನ್ಸ್ ಮ್ಯಾನೇಜರ್ ಆಗಿದ್ದಾರೆ ಎಂದು ಹೇಳಲಾಗಿದೆ. 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ.

ಮನೆಯಲ್ಲಿ ಕೆಲವು ಗಂಟೆಗಳ ಕಾಲ ದಾಖಲೆ ಪರಿಶೀಲನೆ ನಡೆಸಿದ ಐಟಿ ಅಧಿಕಾರಿಗಳು ನಂತರ ಸದಾಶಿವ್ ಅಮೀನ್ ಅವರನ್ನು ಹೆಚ್ಚಿನ ವಿಚಾರಣೆಗೆ ಕಚೇರಿಗೆ ಕರೆದೊಯ್ದರು. ಉಡುಪಿ ತಹಶೀಲ್ದಾರ್ ರ ಸಮ್ಮುಖದಲ್ಲಿ ಐಟಿ ಅಧಿಕಾರಿಗಳು ಸದಾಶಿವ್ ಅಮೀನ್ ಅವರ ವಿಚಾರಣೆ ನಡೆಸಿದ್ದಾರೆ.

income tax

ಚುನಾವಣೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನೊಂದು ಗಮನಿಸಬೇಕಾದ ಅಂಶ ಎಂದರೆ ಚುನಾವಣೆ ಕರ್ತವ್ಯ ವಾಹನದಲ್ಲಿ ಬಂದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

'ಐಟಿ ಅಧಿಕಾರಿಗಳು ದಾಳಿ ನಡೆಸಿದರೆ ಕುಮಾರಸ್ವಾಮಿ ಮುಖದಲ್ಲಿ ಏಕೆ ಗಾಬರಿ?''ಐಟಿ ಅಧಿಕಾರಿಗಳು ದಾಳಿ ನಡೆಸಿದರೆ ಕುಮಾರಸ್ವಾಮಿ ಮುಖದಲ್ಲಿ ಏಕೆ ಗಾಬರಿ?'

ಬೆಂಗಳೂರು ಸೇರಿ ರಾಜ್ಯದ ಇತರೆಡೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಆಪ್ತನ ಮನೆ ಮೇಲೂ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದರು. ಹೊಸಕೋಟೆ ತಾಲೂಕು ಜೆಡಿಎಸ್ ಅಧ್ಯಕ್ಷ ವಿ ಶ್ರೀಧರ್‌ ಅವರ ನಿವಾಸದ ಮೇಲೆ ಬುಧವಾರ 18 ಮಂದಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದರು.

English summary
Income tax raid on Udupi congress leader Sadashiva Ameen on Thursday in Udupi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X