ಇಂದ್ರಾಳಿ ರೈಲ್ವೇ ಮೇಲ್ಸೇತುವೆ & ರಾಷ್ಟ್ರೀಯ ಹೆದ್ದಾರಿ 169ಎ ಕಾಮಗಾರಿ ಅಪ್ಡೇಟ್
ರಾಜ್ಯದಲ್ಲಿ ರೈಲ್ವೆ ಹಾಗೂ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ದೊಡ್ಡ ಕ್ರಾಂತಿಯೇ ಆಗುತ್ತಿದೆ. ಈ ನಡುವೆಯೇ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಹಾಗೂ ರಾಷ್ಟ್ರೀಯ ಹೆದ್ದಾರಿ 169ಎ ರಸ್ತೆ ಕಾಮಗಾರಿ ಮುನ್ನಲೆಗೆ ಬಂದಿದೆ. ಹಾಗಾದ್ರೆ ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರೀ ಮಳೆಯಿಂದಾಗಿ ಈಗಾಗಲೇ ರಾಜ್ಯದ ಹಲವೆಡೆ ರಾಷ್ಟ್ರೀಯ ಹೆದ್ದಾರಿ ತಡೆಗೋಡೆಗಳು ಕುಸಿತಗೊಂಡ ಘಟನೆಗಳು ನಡೆದಿವೆ. ಇನ್ನೂ ಕೆಲವೆಡೆ ಹೆದ್ದಾರಿ ಮೇಲೆ ಮಣ್ಣು ಬಿದ್ದು ವಾಹನ ಸಾವರರು ಪರದಾಡಿದ ಉದಾಗರಣೆಗಳಿವೆ. ಈ ನಡುವೆಯೇ ರಾಜ್ಯದಲ್ಲಿ ರೈಲ್ವೆ, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳು ಮುಂದುವರೆದಿದ್ದು, ಇದೀಗ ಇಂದ್ರಾಣಿ ರೈಲ್ವೇ ಮೇಲ್ಸೇತುವೆ ಹಾಗೂ ರಾಷ್ಟ್ರೀಯ ಹೆದ್ದಾರಿ 169ಎ ಕಾಮಗಾರಿ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಪ್ಡೇಟ್ ಮಾಹಿತಿಯೊಂದನ್ನು ಕೊಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 169ಎ ಮತ್ತು ಇಂದ್ರಾಳಿ ರೈಲ್ವೇ ಮೇಲ್ಸೇತುವೆ ನಿರ್ಮಾಣದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಂದ್ರಾಳಿ ರೈಲ್ವೇ ಮೇಲ್ಸೇತುವೆಯ ಕಾಂಕ್ರೀಟೀಕರಣ ಕಾಮಗಾರಿ ಪೂರ್ಣಗೊಂಡಿದೆ. ಸೆಪ್ಟೆಂಬರ್ 15ರಿಂದ ವಾಹನ ಸಂಚಾರಕ್ಕೆ ಮುಕ್ತ ಆಗುವಂತೆ ಎರಡೂ ಬದಿಯ ಆಧಾರ ಸ್ತಂಭ ನಿರ್ಮಾಣ ಕಾಮಗಾರಿಯನ್ನ ಮುಗಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗದಿತ ಅವಧಿಯೊಳಗೆ ಮುಕ್ತಾಯ ಆಗುತ್ತಿಲ್ಲ. ಇದರಿಂದ ಸಾರ್ವಜನಿಕರು ತುಂಬಾ ತೊಂದರೆ ಅನುಭವಿಸುವಂತಾಗಿದೆ. ಭಾರೀ ಮಳೆ ಮುಂದುವರೆದ ಕಾರಣ ರಸ್ತೆಗಳಲ್ಲಿ ಬೃಹತ್ ಪ್ರಮಾಣದ ಗುಂಡಿಳು ಬಿದ್ದಿದ್ದು, ಕೂಡಲೇ ದುರಸ್ತಿ ಮತ್ತು ನಿರ್ವಹಣಾ ಕಾರ್ಯ ಮಾಡಬೇಕೆಂದು ಸೂಚಿಸಿದರು.
ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗಿನ ರಾಷ್ಟ್ರೀಯ ಹೆದ್ದಾರಿ 169ಎ ರಸ್ತೆ ಕಾಮಗಾರಿ ಬಗ್ಗೆ ಮಾತನಾಡಿ, ಭೂಸ್ವಾಧೀನಕ್ಕೆ ಪರಿಹಾರವನ್ನ ಶೀಘ್ರದಲ್ಲೇ ಬಿಡುಗಡೆ ಮಾಡಬೇಕು. ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ಸೆಪ್ಟೆಂಬರ್ ಮೊದಲ ವಾರದಿಂದ ಪ್ರಾರಂಭ ಆಗಬೇಕೆಂದು ಎಚ್ಚರಿಕೆ ನೀಡಿದರು.
ಕರಾವಳಿ ಜಂಕ್ಷನ್‌ನಲ್ಲಿ ಮುಕ್ತ ಪ್ರದೇಶವನ್ನು ಅಭಿವೃದ್ಧಿ ಮಾಡುವ ಮೂಲಕ ಸಣ್ಣ ಪ್ರಮಾಣದ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಶಾಶ್ವತ ಕಾಮಗಾರಿ ಆರಂಭಿಸುವ ಮಂಚೆಯೇ ತಾತ್ಕಾಲಿಕ ರಸ್ತೆಗಳಲ್ಲಿನ ಗುಂಡಿಗಳನ್ನು ಬೇಗನೇ ಮುಚ್ಚಬೇಕು. ಭೂಸ್ವಾಧೀನ ದಾಖಲೆಗಳನ್ನ ಒದಗಿಸದ 18 ಪ್ರಕರಣಗಳಲ್ಲಿ, ಪರಿಹಾರವನ್ನು ನ್ಯಾಯಾಲಯದ ಮೂಲಕ ಠೇವಣಿ ಇಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಲ್ಲದೆ, ಉಳಿದ 90 ಬಾಕಿ ಇರುವ ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದಂತೆ, ಎರಡು ದಿನಗಳಲ್ಲಿ 3ಡಿ ಔಪಚಾರಿಕತೆಗಳನ್ನ ಪೂರ್ಣಗೊಳಿಸಿ ಬೆಂಗಳೂರಿನ ಆರ್‌ಓ ಕಚೇರಿಗೆ ಸಲ್ಲಿಕೆ ಮಾಡಲು ಸಭೆಯಲ್ಲಿ ಅಧಿಕಾರಿಗಳಿಗಳೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಂಡರು.
ಹೆಬ್ರಿ-ಕಾರ್ಕಳ ರಸ್ತೆ ಹಾಗೂ ಆಗುಂಬೆ ಘಾಟ್ ಹೆದ್ದಾರಿಗೆ ಸಂಬಂಧಪಟ್ಟಂತೆ ವಿವರವಾದ ಯೋಜನೆ ವರದಿ ತಯಾರಿಸಲಾಗುತ್ತಿದೆ. ಎರಡೂ ಯೋಜನೆಗಳಿಗೆ ಟೆಂಡರ್ ಪ್ರಕ್ರಿಯೆಗಳನ್ನ ಶೀಘ್ರವಾಗಿ ಪೂರ್ಣಗೊಳಿಸಿ, ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಸೂಚಿಸಿದರು.
ಇನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.ಮಾತನಾಡಿ, ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೈಗೆತ್ತಿಕೊಳ್ಳಲು ಪರ್ಯಾಯ ಮಾರ್ಗಗಳನ್ನು ಒದಗಿಸಲು ಈಗಾಗಲೇ ಆದೇಶ ಹೊರಡಿಸಲಾಗಿದೆ. ಅಲ್ಲಿ ರಸ್ತೆ ಕಾಮಗಾರಿಗಳನ್ನು ಶೀಘ್ರವೇ ಪ್ರಾರಂಭ ಮಾಡಬೇಕು. ಜಿಲ್ಲೆಯ ಇತರ ಭಾಗಗಳಲ್ಲಿಯೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ನೀಡಬೇಕಿದೆ. ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಾಗ ಸಾರ್ವಜನಿಕ ವಾಹನಗಳ ಸಂಚಾರಕ್ಕಾಗಿ ತಾತ್ಕಾಲಿಕ ಪರ್ಯಾಯ ರಸ್ತೆಗಳನ್ನು ಕೂಡ ವ್ಯವಸ್ಥೆ ಮಾಡಬೇಕು ಎಂದು ಅವರು ಇಂಜಿನಿಯರ್‌ಗಳಿಗೆ ತಿಳಿಸದರು.
ಮಳೆ ಬಂದ್ರೆ ಸಾಕು ಕರಾವಳಿ ಜಿಲ್ಲೆಯಾದ ಉಡುಪಿ ಜಿಲ್ಲೆ ಭಾಗದ ರಾಷ್ಟ್ರೀಯ ಹೆದ್ದಾರಿಗಳಿಗೆ ಮಣ್ಣು ಸುರಿದು ಸಂಪೂರ್ಣವಾಗಿ ಮುಚ್ಚುವ ಹಂತಕ್ಕೆ ತಲುಪಿಬಿಡುತ್ತವೆ. ಇದರಿಂದ ವಾಹನ ಸವಾರರು ಪರದಾಡುತ್ತಲಿದ್ದಾರೆ. ಇದೀಗ ಇದಕ್ಕೆಲ್ಲ ನಾಂದಿ ಹಾಡಲು ಸಹ ಎಲ್ಲಾ ತಯಾರಿಗಳು ಕೂಡ ನಡೆಯುತ್ತಿವೆ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ












Click it and Unblock the Notifications