ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೋದಿ ಪ್ರಮಾಣ ವಚನ ಕಾರ್ಯಕ್ರಮ; ಪೇಜಾವರ ಶ್ರೀಗಳಿಗೆ ಆಹ್ವಾನ

|
Google Oneindia Kannada News

Recommended Video

ಮೋದಿ 2ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲು ಕ್ಷಣಗಣನೆ | Oneindia Kannada

ಉಡುಪಿ, ಮೇ 30: ಮೋದಿ 2ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿದೆ. ಇಂದು ಸಂಜೆ ಮೋದಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಈ ಭವ್ಯ ಕಾರ್ಯಕ್ರಮದಲ್ಲಿ ಸುಮಾರು 6,500 ಮಂದಿ ಭಾಗಿಯಾಗುವ ನಿರೀಕ್ಷೆ ಇದೆ. ರಾಪ್ಟ್ರಪತಿ ಹಾಗೂ ನರೇಂದ್ರ ಮೋದಿ ಅವರ ತೀರ್ಮಾನದ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ವಿಶೇಷ ಅತಿಥಿಗಳು!ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ವಿಶೇಷ ಅತಿಥಿಗಳು!

ಕಾರ್ಯಕ್ರಮಕ್ಕೆ ಬಂಗಾಳ ಇನಿಷಿಯೇಟಿವ್ ಫಾರ್ ಮಲ್ಟಿ ಸೆಕ್ಟರಲ್ ಟೆಕ್ನಿಕಲ್ ಅಂಡ್ ಎಕನಾಮಿಕ್ ಕೋ ಆಪರೇಷನ್ ಸದಸ್ಯ ರಾಷ್ಟ್ರಗಳಿಗೆ ಆಹ್ವಾನ ನೀಡಲಾಗಿದೆ. ಈ ಬಾರಿ ಸಮಯವನ್ನು ಬದಲಾಯಿಸಿ ಸಂಜೆ 7 ಗಂಟೆಗೆ ಕಾರ್ಯಕ್ರಮ ನಿಗದಿ ಮಾಡಲಾಗಿದೆ. ಅಲ್ಲದೇ ರಾಷ್ಟ್ರಪತಿ ಭವನದ ಫೋರ್ ಕೋರ್ಟಿನಲ್ಲಿ ಸಮಾರಂಭ ನಡೆಯಲಿದೆ.

2019ರ ಮೋದಿ ಸರ್ಕಾರದ ಕೇಂದ್ರ ಸಚಿವ ಸಂಪುಟ ಸದಸ್ಯರು 2019ರ ಮೋದಿ ಸರ್ಕಾರದ ಕೇಂದ್ರ ಸಚಿವ ಸಂಪುಟ ಸದಸ್ಯರು

 Invitation for Pejawara Shree to Modi oath taking ceremony

ಈ ನಡುವೆ ನರೇಂದ್ರ ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪೇಜಾವರ ಶ್ರೀಗಳಿಗೂ ಆಹ್ವಾನ ನೀಡಲಾಗಿದೆ. ಪೇಜಾವರ ಮಠದ ವಿಶ್ವೇಶ ತೀರ್ಥರಿಗೆ ಪ್ರಧಾನಿ ಕಚೇರಿಯಿಂದ ಆಹ್ವಾನ ನೀಡಲಾಗಿದ್ದು, ಇಂದು ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪೇಜಾವರ ಶ್ರೀಗಳು ಭಾಗವಹಿಸಲಿದ್ದಾರೆ. ಮಂಗಳೂರಿನಿಂದ ವಿಮಾನದ ಮೂಲಕ ಪೇಜಾವರ ಶ್ರೀಗಳು ದೆಹಲಿಗೆ ತೆರಳಿದ್ದಾರೆ.

English summary
Prime ministers office invited Udupi Pejawara Shree for Narendra Modi's oath taking ceremony on May 30. it is said that Pejawara Shree going to attend this ceremony.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X