ಉಡುಪಿಯ ಪ್ರಭಾವಿ ಕಾಂಗ್ರೆಸ್ ಮುಖಂಡನ ಮನೆ ಮೇಲೆ ಐಟಿ ರೇಡ್

ಉಡುಪಿ, ಜನವರಿ 23: ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಸೇರಿದಂತೆ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಮತ್ತು ಕ್ರಷರ್ ಮಾಲೀಕ ಜಾಯ್ ಅವರ ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳಿಂದ ಏಕ ಕಾಲಕ್ಕೆ ದಾಳಿ ನಡೆದಿದೆ.

ಮಾಹಿತಿಯ ಪ್ರಕಾರ ಬೆಂಗಳೂರಿನಿಂದ ಬಂದ 150ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿದೆ . ದಾಳಿಗಾಗಿ 60 ವಾಹನಗಳನ್ನು ಮಂಗಳೂರಿನಿಂದ ಬುಕ್ ಮಾಡಲಾಗಿತ್ತು.

IT official raided house of congress leaders

ಮುನಿಯಾಲಿನಲ್ಲಿರುವ ಉದಯ ಕುಮಾರ್ ಶೆಟ್ಟಿಯವರ ಮನೆ, ಗೇರು ಕಾರ್ಖಾನೆ, ಕೋಟದಲ್ಲಿರುವ ಫಿಶ್‍ ಮಿಲ್ ಸಹಿತ ಎಲ್ಲಾ ಕಚೇರಿಗಳ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ. ಜಿಲ್ಲೆಯ ಇತರೆ ಉದ್ಯಮಿಗಳ ಮನೆ ಮೇಲೂ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+