ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ; ಬಡ ಕುಟುಂಬಕ್ಕೆ ಮನೆ ಹಸ್ತಾಂತರ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಏಪ್ರಿಲ್ 01; ತೋನ್ಸೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೂರಿಲ್ಲದ ಕುಟುಂಬಗಳಿಗೆ ಮನೆ ಕಟ್ಟಿ ಕೊಡುವ ಯೋಜನೆಯಡಿಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಹೂಡೆ 17ನೇ ಮನೆಯನ್ನು ಬಡ ಕುಟುಂಬವೊಂದಕ್ಕೆ ಹಸ್ತಾಂತರಿಸಿದರು.

ಮನೆಯ ಬೀಗವನ್ನು ಫಲಾನುಭವಿಗೆ ಹಸ್ತಾಂತರಿಸಿ ಮಾತನಾಡಿದ ಜಮಾಅತೆ ಇಸ್ಲಾಮಿ ಹಿಂದ್ ಮಲ್ಪೆಯ ಅಧ್ಯಕ್ಷರಾದ ರಫೀಕ್, "ಇಸ್ಲಾಮಿನ ಆದರ್ಶದಂತೆ ಅನಾಥರಿಗೆ, ದೀನ ದಲಿತರಿಗೆ ಸಹಾಯ ಮಾಡುವುದು ಉಳ್ಳವರ ಕರ್ತವ್ಯವಾಗಿದೆ. ಅದಕ್ಕಾಗಿ ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆ ಇಡೀ ದೇಶದಾದ್ಯಂತ ಸಮಾಜ ಸೇವಾ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡಿದೆ" ಎಂದರು.

ದೆಹಲಿಯ ಟಿಕ್ರಿಯಲ್ಲಿ ಶಾಶ್ವತ ಮನೆ ನಿರ್ಮಿಸಿ ಹೋರಾಟ ಮುಂದುವರೆಸಿದ ರೈತರು ದೆಹಲಿಯ ಟಿಕ್ರಿಯಲ್ಲಿ ಶಾಶ್ವತ ಮನೆ ನಿರ್ಮಿಸಿ ಹೋರಾಟ ಮುಂದುವರೆಸಿದ ರೈತರು

"ಕೋವಿಡ್ ಸಂದರ್ಭದಲ್ಲಿ, ನೆರೆಯ ಸಂದರ್ಭದಲ್ಲಿ, ಅನಾಹುತಗಳ ಸಂದರ್ಭದಲ್ಲಿ ಜೆ.ಐ.ಎಚ್ ತನ್ನಿಂದಾದ ಸಹಾಯವನ್ನು ಮಾಡುತ್ತ ಬಂದಿದೆ. ಸಂಘಟನೆಯ ಹೂಡೆ ಘಟಕ ಕೂಡ ಇಂತಹ ಮಾದರಿ ಕೆಲಸವನ್ನು ನಿರಂತರ ಮಾಡಿಕೊಂಡು ಬಂದಿದೆ. ಅದಕ್ಕೆ ಸಾಕ್ಷಿಯೆಂಬಂತೆ 17ನೇ ಮನೆಯನ್ನು ಅವರು ಇಂದು ಹಸ್ತಾಂತರಿಸುತ್ತಿದ್ದಾರೆ. ನಿಜವಾಗಿಯೂ ಈ ಕಾರ್ಯ ಶ್ಲಾಘನೀಯ" ಎಂದು ಹೇಳಿದರು.

ಬೆಂಗಳೂರು ವಸತಿ ಯೋಜನೆ; ಅರ್ಜಿ ಸಲ್ಲಿಕೆಗೆ ಅರ್ಹತೆ ಏನು? ಬೆಂಗಳೂರು ವಸತಿ ಯೋಜನೆ; ಅರ್ಜಿ ಸಲ್ಲಿಕೆಗೆ ಅರ್ಹತೆ ಏನು?

Jamaat E Islami Hind Hand Over The House Key

ತೋನ್ಸೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ನಿತ್ಯಾನಂದ ಕೆಮ್ಮಣ್ಣು ಮಾತನಾಡಿ, "ಜಾತಿ, ಮತ, ಧರ್ಮದ ಬೇಧವಿಲ್ಲದೆ ಇವತ್ತು ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆ ಸಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಗ್ರಾಮದ ಅತೀ ಬಡ ಕುಟುಂಬ ಗುರುತಿಸಿ ಮನೆಯೊದಗಿಸುವ ಕಾರ್ಯ ನಿಜಕ್ಕೂ ಶ್ಲಾಘನೀಯ. ಅವರ ಸಮಾಜಮುಖಿ ಕಾರ್ಯಗಳು ಮತ್ತಷ್ಟು ಮುಂದುವರಿಯಲಿ" ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಮನೆ ಕಟ್ಟಿಕೊಳ್ಳಲು ಸರ್ಕಾರದ ಅನುದಾನ: ವಸತಿ ಸಚಿವ ವಿ. ಸೋಮಣ್ಣ ಬೆಂಗಳೂರಿನಲ್ಲಿ ಮನೆ ಕಟ್ಟಿಕೊಳ್ಳಲು ಸರ್ಕಾರದ ಅನುದಾನ: ವಸತಿ ಸಚಿವ ವಿ. ಸೋಮಣ್ಣ

ಈ ಸಂದರ್ಭದಲ್ಲಿ ತೋನ್ಸೆ ಪಂಚಾಯತಿ ಕಾರ್ಯದರ್ಶಿಗಳಾದ ದಿನಕರ್, ತಾಲೂಕು ಪಂಚಾಯತ್ ಸದಸ್ಯೆ ಸುಲೋಚನ ಸತೀಶ್ ಯಶೋಧ, ಉಸ್ತಾದ್ ಸಾದೀಕ್ ಮಾತನಾಡಿ ಶುಭ ಹಾರೈಸಿದರು. ಜಮಾಅತೆ ಇಸ್ಲಾಮಿ ಹಿಂದ್, ಹೂಡೆಯ ಅಧ್ಯಕ್ಷರಾದ ಅಬ್ದುಲ್ ಕಾದೀರ್ ಮೊಯ್ದಿನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Recommended Video

ಆಲ್‌ಟೈಮ್ ಐಪಿಎಲ್ XI ಹೆಸರಿಸಿದ ಎಬಿ ಡಿವಿಲಿಯರ್ಸ್ | Oneindia Kannada

ಈ ಸಂದರ್ಭದಲ್ಲಿ ತೋನ್ಸೆ ಗ್ರಾಮ ಪಂಚಾಯತಿ ಸದಸ್ಯರಾದ ಇದ್ರಿಸ್ ಹೂಡೆ, ಜಮೀಲಾ, ವಿಜಯ್, ಮಮ್ತಾಝ್, ಜೆ.ಐ.ಎಚ್ ಹೂಡೆ ಕಾರ್ಯದರ್ಶಿ ಹಸನ್ ಕೋಡಿಬೆಂಗ್ರೆ ಉಪಸ್ಥಿತರಿದ್ದರು. ಆದಿಲ್ ಹೂಡೆ ಪ್ರಸ್ತಾವಿಕ ನುಡಿಗಳನ್ನಾಡಿದರು. ಮುಫೀದ್ ಹೂಡೆ ಕಾರ್ಯಕ್ರಮ ನಿರೂಪಿಸಿದರು.

English summary
Jamaat-e-Islami Hind's Hoode unit handover the key of 17th house to family members.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X