ಉಡುಪಿಯಲ್ಲಿ ಫೆ.24ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ
ಉಡುಪಿ, ಫೆಬ್ರವರಿ 22 : ಉಡುಪಿಯಲ್ಲಿ ಫೆ.24ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. 18 ರಿಂದ 35 ವರ್ಷ ವಯೋಮಿತಿಯ ಯುವಕ/ಯುವತಿಯರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಉಡುಪಿ ಜಿಲ್ಲಾಡಳಿತ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ, ಕೈಗಾರಿಕಾ ಮತ್ತು ಉದ್ಯೋಗ ತರಬೇತಿ ಇಲಾಖೆ ಹಾಗೂ ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ್ ಯೋಜನೆ ಜಂಟಿಯಾಗಿ ಉಡುಪಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜನೆ ಮಾಡಿವೆ.
ಫೆ.24ರ ಭಾನುವಾರ ಬೆಳಗ್ಗೆ 8.30 ರಿಂದ ವಿವೇಕ ಪದವಿ ಪೂರ್ವ ಕಾಜೇಜು, ಎನ್‌ಎಚ್ 66 ಬಳಿ ಕೋಟ ಇಲ್ಲಿ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಪಾಳ್ಗೊಳ್ಳಲು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ.

18 ರಿಂದ 35 ವರ್ಷ ವಯೋಮಿತಿಯ ಯುವಕ/ಯುವತಿಯರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರವನ್ನು ನೀಡಲಾಗುತ್ತದೆ.












Click it and Unblock the Notifications