ಕಾಂತೇಶ್‌ಗೆ ಹಾವೇರಿ ಟಿಕೆಟ್ ಸಿಗುತ್ತೆ, ಗೆಲ್ತಾನೆ: ಕೊಲ್ಲೂರು ದೇವಾಲಯಲ್ಲಿ ಈಶ್ವರಪ್ಪ ಭರವಸೆ

ಉಡುಪಿ, ಮಾರ್ಚ್ 12: ಮಾಜಿ ಸಚಿವ ಈಶ್ವರಪ್ಪ ಇಂದು(ಮಾರ್ಚ್ 12) ಮಂಗಳವಾರ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಕುಟುಂಬ ಸಮೇತರಾಗಿ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮೂಕಾಂಬಿಕಾ ದರ್ಶನ ಪಡೆದ ಬಳಿಕ ಕೊಲ್ಲೂರು ದೇವಾಲಯದಲ್ಲಿರುವ ವೀರಭದ್ರನ ದೇವರಿಗೆ ಕಾಯಿ ಸಮರ್ಪಿಸಿದ್ದಾರೆ.

K S Eshwarappa And Family Visit Kollur Mookambika Temple

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, "ಯಾವಾಗಲೂ ನಾವು ಕೊಲ್ಲೂರು ಕ್ಷೇತ್ರಕ್ಕೆ ಬರುತ್ತಾ ಇರುತ್ತೇವೆ. ನನ್ನ ಮಗ ಕಾಂತೇಶ್‌ ಹಾವೇರಿಯಿಂದ ಸ್ಪರ್ಧೆ ಮಾಡಬೇಕು ಎಂದು ಬಯಸಿದ್ದಾನೆ. ಈ ಬಗ್ಗೆ ಮೂಕಾಂಬಿಕೆಯ ಬಳಿ ಪೂಜೆ ಮಾಡಿ ಬೇಡಿಕೊಂಡಿದ್ದೇವೆ. ಕಾಂತೇಶ್‌ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲಲಿ" ಎಂದು ಪ್ರಾರ್ಥಿಸಿದ್ದೇವೆ ಎಂದರು.

"ಕಾಂತೇಶ್‌ಗೆ ಟಿಕೆಟ್ ಸಿಕ್ಕಿ ಗೆಲ್ಲುತ್ತಾನೆ ಎಂಬ ವಿಶ್ವಾಸವಿದೆ. ರಾಜ್ಯದಲ್ಲೂ ದೇಶದಲ್ಲೂ ಬಿಜೆಪಿ ಜಯ ಪಡೆಯಲಿ ಎಂದು ಪ್ರಾರ್ಥಿಸಿದ್ದೇನೆ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಪ್ರಾರ್ಥನೆ ಮಾಡಿದ್ದೇವೆ" ಎಂದು ಹೇಳಿದರು.

"ಪ್ರಸ್ತುತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಗುತ್ತಿರುವ ಚರ್ಚೆ ಬಗ್ಗೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, ವೈರಲ್ ಆಗುತ್ತಿರುವ ವಿಚಾರಗಳ ಬಗ್ಗೆ ಇಲ್ಲಿ ನಾನು ಮಾತನಾಡಲ್ಲ. ದೇವಸ್ಥಾನದಲ್ಲಿ ಒಳ್ಳೆಯ ವಿಚಾರಗಳನ್ನು ಮಾತನಾಡಲು ಇಷ್ಟಪಡುತ್ತೇನೆ. ಕಾಂತೇಶ್‌ಗೆ ಟಿಕೆಟ್ ಸಿಗುತ್ತದೆ, ಅವನು ಚುನಾವಣೆ ಗೆಲ್ತಾನೆ, ಮೋದಿ ಪ್ರಧಾನಿ ಆಗುತ್ತಾರೆ" ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+