ಮಂಗಳೂರಿನಲ್ಲಿ ನಡು ರಸ್ತೆಯಲ್ಲೇ ನಮಾಜ್: ಸಿಎಂ, ಸರ್ಕಾರ ಸತ್ತಿದೆಯೋ? ಎಂದ ಈಶ್ವರಪ್ಪ
ಉಡುಪಿ, ಮೇ 28: ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ನಮಾಜ್ ಮಾಡಿರುವ ಘಟನೆ ಕಳೆದ ಶುಕ್ರವಾರ ನಡೆದಿದ್ದು, ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಈ ಬಗ್ಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ರಾಜ್ಯ ಸರ್ಕಾರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಹಿಂದುತ್ವ ವೀರರ ಭೂಮಿ. ರಸ್ತೆಯಲ್ಲಿ ನಮಾಜ್ ಮಾಡಲು ದುಷ್ಟ ಶಕ್ತಿಗಳ ಯಶಸ್ವಿಯಾಗಿದ್ದು ನೋವಾಗಿದೆ. ಕರ್ನಾಟಕದಲ್ಲಿ ಮುಖ್ಯಮಂತ್ರಿಗಳು, ಗೃಹ ಸಚಿವರು, ಸರ್ಕಾರ ಸತ್ತಿದೆಯೋ, ಬದುಕಿದೆಯೋ ಎಂದು ಪ್ರಶ್ನಿಸಿದ್ದಾರೆ.

ಒಬ್ಬ ಇದು ನಮ್ಮ ಸರ್ಕಾರ ಟಿಪ್ಪು ಸುಲ್ತಾನ್‌ನ ರಾಜ್ಯ ಅಂತಾನೇ, ಮುಸಲ್ಮಾನ್ ಗೂಂಡಾ, ರಾಷ್ಟ್ರದೋಹಿ ಈ ಮೆಸೇಜ್ ಮಾಡಿದ್ದಾನೆ. ಬಿಟ್ಟರೆ ಹಿಂದೂಗಳ ಮನೆಗೆ ಬಂದು ನಮಾಜ್ ಮಾಡುತ್ತಾರೆ. ರಾಜ್ಯದಲ್ಲಿ ಪೊಲೀಸ್ ಇಲಾಖೆ ಬದುಕಿದೆಯೋ ಸತ್ತಿದೆಯೋ ಗೊತ್ತಾಗುತ್ತಿಲ್ಲ. ಚೆನ್ನಗಿರಿಯಲ್ಲಿ ನಿರಪರಾಧಿ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಯಿತು.
ಮುಸಲ್ಮಾನರು ಏನು ಬೇಕಾದರೂ ಮಾಡಬಹುದು ಎನ್ನಲು ಇದು ಪಾಕಿಸ್ತಾನ ಅಲ್ಲ ಹಿಂದೂಸ್ತಾನ. ಮಂಗಳೂರು ಪಾಕಿಸ್ತಾನದ ಜಿಲ್ಲೆಯಲ್ಲ, ನೆನಪಿಟ್ಟುಕೊಳ್ಳಿ. ವಿಡಿಯೋ ಪತ್ರಿಕೆ ವರದಿ ಆಧರಿಸಿ ಎಲ್ಲರನ್ನು ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಪೊಲೀಸ್ ಠಾಣೆಗೆ ಪ್ರೈವೇಟ್ ಸೆಕ್ಯೂರಿಟಿ ನೀಡಬೇಕು ಎನ್ನುವ ಚರ್ಚೆಯಾಗುತ್ತಿದೆ. ಗೃಹ ಮಂತ್ರಿಗಳು ಆ ಸ್ಥಾನದಲ್ಲಿ ಉಳಿಯಲು ಸಮರ್ಥ ಅಲ್ಲ . ಪ್ರೈವೇಟ್ ಸರ್ಕ್ಯೂರಿಟಿ ಕೊಡುವ ಚರ್ಚೆ ಆಗುತ್ತಿರುವುದು ದುರಾದೃಷ್ಟ. ಉಡುಪಿ ಗ್ಯಾಂಗ್ ವಾರ್, ಕೊಲೆಗಳು, ಠಾಣೆಗಳ ಮೇಲೆ ದಾಳಿಯನ್ನು ಸಿಎಂ ಗೃಹ ಸಚಿವರು ಸಮರ್ಥನೆ ಮಾಡುತ್ತಿದ್ದಾರೆ. ಕ್ರಮ ತೆಗೆದುಕೊಳ್ಳದಿದ್ದರೆ ಇಡೀ ರಾಜ್ಯದಲ್ಲಿ ಹಿಂದೂ ಸಮಾಜ ಜಾಗೃತವಾಗಬೇಕಾಗುತ್ತದೆ ಇದು ನನ್ನ ಎಚ್ಚರಿಕೆ ಎಂದಿದ್ದಾರೆ.

ಘಟನೆ ಹಿನ್ನೆಲೆ ಏನು..?
ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ನಮಾಜ್ ಮಾಡಿರುವ ಘಟನೆ ಕಳೆದ ಶುಕ್ರವಾರ ನಡೆದಿದ್ದು ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಕಂಕನಾಡಿಯಲ್ಲಿನ ಮಸೀದಿ ಮುಂದೆ ಇರುವ ರಸ್ತೆಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಗಿದೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದ್ದು, ವಾಹನ ಸವಾರರು ಯೂಟರ್ನ್ ತೆಗೆದುಕೊಂಡು ಹೋಗಿದ್ದಾರೆ. ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.












Click it and Unblock the Notifications