ಉಡುಪಿಯಲ್ಲಿ ಭಾರೀ ಮಳೆಗೆ ಮತ್ತೊಂದು ಬಲಿ: ಕಮಲಶಿಲೆ ಅರ್ಚಕ ಸಾವು

ಉಡುಪಿ, ಜುಲೈ 05: ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಮೂರನೇ ಸಾವು ಸಂಭವಿಸಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ.

ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಮುಳುಗಿ ದೇವಾಲಯದ ಅರ್ಚಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆಯಲ್ಲಿ ನಡೆದಿದೆ. ಶೇಷಾದ್ರಿ ಐತಾಳ್ ( 75) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಮಲಶಿಲೆ ಸಮೀಪದ ತಪ್ಪಲು ನಿವಾಸಿ ಶೇಷಾದ್ರಿ ಐತಾಳ್ ಅವರು ಎಂದಿನಂತೆ ಇಂದು (ಜುಲೈ 05) ಕೂಡ ಪ್ರಸಿದ್ಧ ದೇವಾಲಯ ಕಮಲಶಿಲೆಗ ಪೂಜೆ ಮಾಡಲು ಆಗಮಿಸುತ್ತಿದ್ದರು.

Kamalashile Priest Death

ಕಳೆದ ಎರಡು ದಿನಗಳಿಂದ ಸುರಿದ ನಿರಂತರ ಭಾರೀ ಮಳೆಗೆ ಕಮಲಶಿಲೆ ದೇವಳದ ಪಕ್ಕದಲ್ಲಿ ಹರಿಯುವ ಕುಬ್ಜಾ ನದಿ ಉಕ್ಕಿ ಹರಿಯುತ್ತಿದ್ದು, ಅರ್ಚಕರು ಆಯತ ತಪ್ಪಿ ನದಿಗೆ ಬಿದ್ದು ನೀರು ಪಾಲಾಗಿದ್ದಾರೆ. ನದಿಗೆ ಬಿದ್ದ ಜಾಗದಿಂದ ಸುಮಾರು ನೂರು ಮೀಟರ್ ದೂರಲ್ಲಿ ಶೇಷಾದ್ರಿ ಐತಾಳ್ ಅವರ ಮೃತದೇಹ ಪತ್ತೆಯಾಗಿದ್ದು, ಮುಳುಗು ತಜ್ಞ ಮಂಜುನಾಥ್ ನಾಯಕ್ ತಂಡ ಮೃತದೇಹ ಪತ್ತೆ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆಯಲ್ಲಿ ಕೂಡ ಮಳೆಯ ಅವಾಂತರದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ದಿವಾಕರ್ ಶೆಟ್ಟಿ ಮೃತ ದುರ್ದೈವಿ. ನಿನ್ನೆ ತಡರಾತ್ರಿ ಹೋಟೆಲ್‌ ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಬೈಕ್‌ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು, ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಮುಳುಗು ತಜ್ಞ ಈಶ್ವರಮಲ್ಪೆ ಮೃತದೇಹ ಮೇಲೆತ್ತುವ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಡುಬಿದ್ರಿಯಲ್ಲಿ ಹೆಚ್ಚಾದ ಕಡಲ್ಕೊರೆತ

ಉಡುಪಿ ಭಾರೀ ಮಳೆಯಾಗುತ್ತಿದ್ದು, ಪಡುಬಿದ್ರಿ ಸಮೀಪದ ಕಾಡಿಪಟ್ಣದಲ್ಲಿ ಕಡಲ್ಕೊರೆತ ಹೆಚ್ಚಾಗಿ ತಡೆಗೋಡೆ ಸಮುದ್ರ ಪಾಲಾಗಿದೆ. ಅಲ್ಲದೇ ಅಲೆಗಳ ಅಬ್ಬರಕ್ಕೆ ತೆಂಗಿನ ಮರಗಳು ಧರೆಗೆ ಉರುಳಿವೆ. ಇನ್ನು ಮಳೆಯ ಅವಾಂತರ ಹೆಚ್ಚಾಗುತ್ತಿದ್ದು, ಮಣಿಪಾಲ ರಸ್ತೆ ಬದಿಯಲ್ಲಿ ಗುಡ್ಡ ಬಿದ್ದಿದೆ. ಅಲ್ಲದೇ ಬೀಡಿನಗುಡ್ಡೆಯ ನಾಗಬನದ ಬಳಿ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದಾರೆ. ಸದ್ಯ ಉಡುಪಿ ಜಿಲ್ಲೆಯಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+