• search
  • Live TV
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹೆರಿಗೆ ಸಮಯ ಚಿಕಿತ್ಸೆ ಫಲಿಸದೇ ಮಹಿಳಾ ಪೇದೆ ಸಾವು

By ಉಡುಪಿ ಪ್ರತಿನಿಧಿ
|

ಉಡುಪಿ, ಮಾರ್ಚ್ 6: ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದೇ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೆಬಲ್ ಶ್ಯಾಮಲಾ (37) ಹೆರಿಗೆ ಸಂದರ್ಭ ಅಧಿಕ ರಕ್ತಸ್ರಾವದಿಂದಾಗಿ ಸಾವನ್ನಪ್ಪಿದ್ದಾರೆ.

ಶ್ಯಾಮಲಾ ಅವರು ಮಾ.3ರಂದು ಕಾರ್ಕಳ ರೋಟರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಮಂಗಳವಾರ ಮಧ್ಯಾಹ್ನ ಹೆರಿಗೆಯಾಗಿತ್ತು. ಈ ಸಂದರ್ಭ ಅವರಿಗೆ ಅಧಿಕ ರಕ್ತಸ್ರಾವವಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶ್ಯಾಮಲಾ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಸಂಜೆ ಮೃತಪಟ್ಟಿದ್ದಾರೆ. ಇವರ ಪತಿ ಗಿರಿಧರ್ ಕೂಡ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

English summary
Head constable Shyamala (37) of Karkala city police station has died by failure of treatment after delivery
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X