ಕಾರ್ಕಳದ ತಾಯಿ-ಮಗ ಕಾರು ಅಪಘಾತದಲ್ಲಿ ಸಾವು

By: ಒನ್ಇಂಡಿಯಾ ಪ್ರತಿನಿಧಿ
Subscribe to Oneindia Kannada

ಕಾರ್ಕಳ, ಅಕ್ಟೋಬರ್ 6: ಲಾರಿ ಹಾಗೂ ನ್ಯಾನೋ ಕಾರು ಮಧ್ಯೆ ಡಿಕ್ಕಿಯಾಗಿ, ಕಾರಿನಲ್ಲಿದ್ದ ತಾಯಿ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಕಾರ್ಕಳ ತಾಲೂಕಿನ ಮಿಯಾರು ಗ್ರಾಮದ ಜೋಡುಕಟ್ಟೆಯ ಆಯಿಲ್ ಮಿಲ್‌ ಮಾಲೀಕ ವಾಲ್ಟರ್ ಡಿಸೋಜ ಅವರ ಪತ್ನಿ ಶಾಲೆಟ್ ಡಿಸೋಜ (45) ಹಾಗೂ ಅವರ ಪುತ್ರ ವಿನ್ಸನ್ ಡಿಸೋಜ (21) ಮೃತರು.

ನಾಲ್ಕು ತಿಂಗಳ ಹಿಂದಷ್ಟೇ ಖರೀದಿಸಿದ ನ್ಯಾನೋ ಕಾರನ್ನು ಮಂಗಳೂರಿನ ಶೋರೂಂನಲ್ಲಿ ಸರ್ವೀಸ್‌ ಮಾಡಿಸಿ ಕಾರ್ಕಳಕ್ಕೆ ಹಿಂದಿರುಗುತ್ತಿದ್ದರು. ಈ ಸಂದರ್ಭದಲ್ಲಿ ಭತ್ತದ ಕಟಾವು ಯಂತ್ರವನ್ನು ಹೇರಿಕೊಂಡು ಕಾರ್ಕಳದಿಂದ ಪಡುಬಿದ್ರೆ ಮಾರ್ಗವಾಗಿ ಮಂಗಳೂರಿನತ್ತ ತೆರಳುತ್ತಿದ್ದ ಲಾರಿಯು ಬೆಳ್ಮಣ್ ಕಡೆಯಿಂದ ಬರುತ್ತಿದ್ದ ಕಾರಿಗೆ ನಿಟ್ಟೆಯ ಲೆಮಿಲಾ ಕ್ರಾಸ್ ಸಮೀಪ ತಿರುವಿನಲ್ಲಿ ಡಿಕ್ಕಿ ಹೊಡೆದಿದೆ.[ಮಂಗಳೂರಿನ ಓದುತ್ತಿದ್ದ ವಿದ್ಯಾರ್ಥಿ ಲಡಾಖ್ ನಲ್ಲಿ ಸಾವು]

Karkala taluk mother and son died in an accident

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜು-ಗುಜ್ಜಾಗಿದ್ದು ಮೃತದೇಹಗಳು ಕಾರಿನ ಒಳಗೆ ಸಿಲುಕಿ ಮುದ್ದೆಯಾಗಿದ್ದವು. ಜೆಸಿಬಿ ಮೂಲಕ ಕಾರನ್ನು ಒಡೆದು ತೆಗೆದು, ಸ್ಥಳೀಯರ ನೆರವಿನಿಂದ ಮೃತದೇಹಗಳನ್ನು ಹೊರತೆಗೆಯಲಾಯಿತು. ಘಟನೆಯಿಂದಾಗಿ ಕಾರ್ಕಳ -ಪಡುಬಿದ್ರೆ ಚತುಷ್ಪಥ ರಸ್ತೆಯಲ್ಲಿ ಮುಕ್ಕಾಲು ಗಂಟೆಗೂ ಅಧಿಕ ಸಂಚಾರ ಸ್ಥಗಿತಗೊಂಡಿತ್ತು.[ತಲೆ ಮೇಲೆ ಟಿಪ್ಪರ್ ಹರಿದು ಮಂಗಳೂರು ವಿದ್ಯಾರ್ಥಿ ಸಾವು]

Karkala taluk mother and son died in an accident

ಮೃತ ವಿನ್ಸನ್ ಡಿಸೋಜ ಇತ್ತೀಚೆಗಷ್ಟೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿ, ಗುಜರಾತ್‌ನ ಕ್ಯಾಪ್ಟನ್ ಟ್ರ್ಯಾಕ್ಟರ್ ಕಂಪೆನಿಯಲ್ಲಿ ಉದ್ಯೋಗಕ್ಕೆ ಆಯ್ಕೆಯಾಗಿದ್ದರು. ಒಂದೂವರೆ ತಿಂಗಳ ಹಿಂದಷ್ಟೇ ಕೆಲಸಕ್ಕೆ ಸೇರಿದ್ದರು. ಆ ನಂತರ ವಸತಿ ಸೌಲಭ್ಯ ಸರಿಯಿಲ್ಲದ ಕಾರಣ ಉದ್ಯೋಗ ತ್ಯಜಿಸಿ ಊರಿಗೆ ಮರಳಿದ್ದರು. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Karkala taluk mother and son died in an accident near Nitte on Wednesday. Miyaru Jodikatte Oil mill owner Walter disoza wife Shallet and Winson died, while they are coming back from Mangalore after car service.
Please Wait while comments are loading...