ಪಿಯು ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಉಡುಪಿಯ ಅಭಿಜ್ಞಾ ರಾವ್ ರಾಜ್ಯಕ್ಕೆ ಪ್ರಥಮ
ಉಡುಪಿ, ಜುಲೈ 14: ಕೊರೊನಾ ವೈರಸ್ ಸೋಂಕಿನಿಂದ ವಿಳಂಬವಾಗಿದ್ದ ಬಹು ನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶವು ಮಂಗಳವಾರ ಮಧ್ಯಾಹ್ನ ಪ್ರಕಟವಾಗಿದ್ದು, ವಿಜ್ಞಾನ ವಿಭಾಗದಲ್ಲಿ ಉಡುಪಿಯ ಅಭಿಜ್ಞಾ ರಾವ್ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ.
Recommended Video
ಉಡುಪಿಯ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿರುವ ಅಭಿಜ್ಞಾ ರಾವ್, ಒಟ್ಟು ೬೦೦ ಅಂಕಗಳಿಗೆ 596 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್ ಆಗಿದ್ದಾಳೆ.
ಅಭಿಜ್ಞಾ ರಾವ್ ಅವರು ಭೌತಶಾಸ್ತ್ರ ವಿಷಯದಲ್ಲಿ 100 ಅಂಕ, ರಸಾಯನಶಾಸ್ತ್ರ ವಿಷಯದಲ್ಲಿ 100 ಅಂಕ, ಗಣಿತ ವಿಷಯದಲ್ಲಿ 100 ಅಂಕ, ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ 100 ಅಂಕ, ಭಾಷಾ ವಿಷಯಗಳಾದ ಇಂಗ್ಲೀಷ್ ವಿಷಯದಲ್ಲಿ 96 ಅಂಕ ಮತ್ತು ಸಂಸ್ಕೃತದಲ್ಲಿ 100 ಅಂಕ ಪಡೆದಿದ್ದಾಳೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಶಾ ಮತ್ತು ವಿಠಲ್ ರಾವ್ ದಂಪತಿ ಪುತ್ರಿ ಅಭಿಜ್ಞಾ ರಾವ್, ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಗಳಿಸಿದ್ದು ತುಂಬಾ ಖುಷಿಯಾಗಿದೆ. ನನ್ನ ಸಾಧನೆಗೆ ಶಿಕ್ಷಕರು ಹಾಗೂ ಪೋಷಕರು ತುಂಬಾ ಸಹಕಾರ ನೀಡಿದ್ದಾರೆ. ಈ ಸಲ ಲಾಕ್ ಡೌನ್ ಇದ್ದ ಕಾರಣ ಓದಲು ತುಂಬ ಸಮಯ ಸಿಕ್ಕಿತು. ಹೀಗಾಗಿ ತುಂಬಾ ಸಮಯ ಓದಲು ಅನುಕೂಲವಾಯಿತು ಎಂದಳು.

ಮುಂದೆ ಇಂಜಿನಿಯರಿಂಗ್ ಓದಬೇಕು ಅಂದುಕೊಂಡಿದ್ದೇನೆ ಎಂದು ತಮ್ಮ ಮನದಾಸೆಯನ್ನು ವ್ಯಕ್ತಪಡಿಸಿದ್ದಾರೆ. ಮಗಳ ಫಲಿತಾಂಶ ಬರುತ್ತಲೇ ಹೆತ್ತವರು ತುಂಬಾ ಖುಷಿಗೊಂಡರು. ಮಗಳಿಗೆ ಸಿಹಿ ತಿನ್ನಿಸಿ ಸಂಭ್ರಮಪಟ್ಟರು.
ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಈ ಎರಡು ಜಿಲ್ಲೆಗಳಲ್ಲಿ ಶೇ. 90.75 ರಷ್ಟು ಫಲಿತಾಂಶ ಬಂದಿದೆ. ವಿಜಯಪುರ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.
ಕಲಾ ವಿಭಾಗದಲ್ಲಿ ಶೇಕಡಾ 41.27ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದರೆ, ವಿಜ್ಞಾನ ವಿಭಾಗದಲ್ಲಿ ಶೇಕಡಾ 76.02ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇಕಡಾ 65.53ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಪಿಯುಸಿ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಿದೆ. ಜೊತೆಗೆ ವಿದ್ಯಾರ್ಥಿಗಳ ಮೊಬೈಲ್‌ಗೂ ಫಲಿತಾಂರ ಬರಲಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications