ಶಿವಮೊಗ್ಗ ಉಪಚುನಾವಣೆ: ಉಡುಪಿಯ ಬೈಂದೂರಿನಲ್ಲೂ ಮತದಾನ!
ಉಡುಪಿ, ನವೆಂಬರ್ 03: ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಶನಿವಾರದಂದು ನಡೆಯುತ್ತಿರುವ ಚುನಾವಣೆಗೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲೂ ಮತದಾನ ನಡೆಯುತ್ತಿದೆ!
ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮುಂಜಾನೆ ಮತಗಟ್ಟೆಗೆ ಆಗಮಿಸಿ ಮತದಾರರು ಹಕ್ಕು ಚಲಾಯಿಸಿದರು. ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಅವರು ಸಹ ಮತದಾನ ಮಾಡಿದರು.
ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರಾದ ಮಧು ಬಂಗಾರಪ್ಪ ಮತ್ತು ಬಿ.ಎಸ್ ರಾಘವೇಂದ್ರ ನಡುವೆ ನೇರ ಫೈಟ್ ನಡೆಯುತ್ತಿದ್ದು, ಮಧು ಬಂಗಾರಪ್ಪ ಕಾಂಗ್ರೆಸ್ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದಾರೆ.

ಬೈಂದೂರು ಕ್ಷೇತ್ರದಲ್ಲಿರುವ ಒಟ್ಟು ಮತದಾರರ ಸಂಖ್ಯೆ 221972. ಇಲ್ಲಿನ ಒಟ್ಟು 246 ಬೂತ್ ಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬೈಂದೂರು ಕ್ಷೇತ್ರದಲ್ಲಿ 95 ಸೂಕ್ಷ್ಮ ಮತಗಟ್ಟೆ, 59 ಅತೀ ಸೂಕ್ಷ್ಮ ಹಾಗೂ 95 ಸಾಮಾನ್ಯ ಮತಗಟ್ಟೆಗಳಿವೆ. ಶಾಂತಿ ಸುವ್ಯವಸ್ಥೆಗಾಗಿ ಒಟ್ಟು 700 ಪೋಲಿಸರು, 2 ಪ್ಯಾರಾ ಮಿಲಿಟರಿ ತುಕಡಿ ನಿಯೋಜಿಸಲಾಗಿದೆ.












Click it and Unblock the Notifications