ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್
ಉಡುಪಿ, ಏಪ್ರಿಲ್ 23: ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಕರಾವಳಿಯಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ರಾಜ್ಯ ಚುನಾವಣಾ ಪ್ರಚಾರದ ಹಿನ್ನಲೆಯಲ್ಲಿ ರಾಜ್ ನಾಥ್ ಸಿಂಗ್ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡರು.
ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸುನಿಲ್ ಕುಮಾರ್ ನಾಮಪತ್ರ ಸಲ್ಲಿಕೆ ಮತ್ತು ಕಾರ್ಯಕರ್ತರ ಸಮಾವೇಶದಲ್ಲಿ ರಾಜ್ ನಾಥ್ ಸಿಂಗ್ ಪಾಲ್ಗೊಂಡರು.

ನಂತರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಗೆ ತೆರಳಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿ ಸಂಜೆ ಉಡುಪಿಗೆ ಆಗಮಿಸಿದರು. ಮಣಿಪಾಲದ ಖಾಸಗಿ ಹೋಟೇಲ್ ನಲ್ಲಿ ಏರ್ಪಡಿಸಿದ್ದ 'ಚಿಂತನ-ಮಂಥನ' ಸಂವಾದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು.
ಬಳಿಕ ಕೃಷ್ಣ ಮಠಕ್ಕೆ ಆಗಮಿಸಿದ ರಾಜ್ ನಾಥ್ ಸಿಂಗ್ ಶ್ರೀ ಕೃಷ್ಣ ಮತ್ತು ಮುಖ್ಯಪ್ರಾಣರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಪೀಠಾಧಿಪತಿ ಫಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ರಾಜ್ ನಾಥ್ ಸಿಂಗ್ ಅವರನ್ನು ಮಠದ ವತಿಯಿಂದ ಗೌರವಿಸಿದರು. ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಮತ್ತು ಬಿಜೆಪಿ ಅಭ್ಯರ್ಥಿ ರಘುಪತಿ ಭಟ್ ಮತ್ತಿತರರು ಉಪಸ್ಥಿತರಿದ್ದರು.











Click it and Unblock the Notifications