Get Updates
Get notified of breaking news, exclusive insights, and must-see stories!

ಕಸ್ತೂರಿ ರಂಗನ್ ವರದಿ; ಉಡುಪಿಯ ಈ ಹಳ್ಳಿಗಳಿಗೆ ಆಪತ್ತು!

ಬೆಂಗಳೂರು, ಜುಲೈ 20: ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಗುರುತಿಸುವ ಕೇಂದ್ರ ಪರಿಸರ ಇಲಾಖೆಯ ಐದನೇ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಗೆ ರಾಜ್ಯ ಸರ್ಕಾರ ಮತ್ತು ಶಾಸಕರು ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ. ಕಸ್ತೂರಿ ರಂಗನ್ ವರದಿಯನ್ನು ಅನುಷ್ಟಾನವನ್ನು ಮಾಡಿದರೇ ಸಾವಿರಾರು ಹಳ್ಳಿಗಳ ಜನರ ಜೀವನ ಹಾಳಾಗುತ್ತದೆ. ಉಡುಪಿ ಜಿಲ್ಲೆಯ ಯಾವ ಹಳ್ಳಿ ಈ ವ್ಯಾಪ್ತಿಗೆ ಬರಲಿದೆ ಎಂಬುದರ ವಿವರಣೆ ಇಲ್ಲಿದೆ.

ಕೇಂದ್ರ ಪರಿಸರ ಇಲಾಖೆ ಜುಲೈ 4ರಂದು ಅಧಿಸೂಚನೆಯನ್ನು ಹೊರಡಿಸಿ ಆಕ್ಷೇಪಣೆಯನ್ನು ಸಲ್ಲಿಸಲು 60 ದಿನಗಳ ಕಾಲಾವಕಾಶವನ್ನು ನೀಡಿದೆ. ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಹೊರಡಿಸಿರುವ ಆದೇಶವನ್ನು ಅಧಿಸೂಚನೆಯನ್ನು ಅನುಸರಿಸಿದರೆ ರಾಜ್ಯದ ಕರಾವಳಿ, ಮಲೆನಾಡು, ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ವಾಸಿಸುವ ಜನ ಜೀವನವೇ ಅಸ್ತವ್ಯಸ್ತವಾಗಿಬಿಡುತ್ತದೆ.

ಕೇಂದ್ರ ಸರ್ಕಾರಕ್ಕೆ ಗಾಡ್ಗಿಳ್ ವರದಿಯು 2010ರಲ್ಲಿ ಸಲ್ಲಿಕೆಯಾಗಿತ್ತು. ಗಾಡ್ಗಿಳ್ ವರದಿಯಲ್ಲಿ ಅವೈಜ್ಞಾನಿಕವಾಗಿದೆ ಎಂದು ಇಸ್ರೋ ವಿಜ್ಞಾನಿ ಕಸ್ತೂರಿ ರಂಗನ್ ನೇತೃತ್ವದ ಸಮಿತಿಯನ್ನು ರಚನೆಯನ್ನು ಮಾಡಲಾಗಿತ್ತು. ಕಸ್ತೂರಿ ರಂಗನ್ ಸಮಿತಿಯ ಅಧ್ಯಯನವನ್ನು ಮಾಡಿ ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪ್ರದೇಶ ಎಂದು ಪರಿಗಣಿಸಲು ವರದಿಯನ್ನು ನೀಡಿತ್ತು. ಅದರಂತೆ ಗುಜರಾತ್, ತಮಿಳುನಾಡು, ಮಹಾರಾಷ್ಟ್ರ, ಗೋವಾ, ಕರ್ನಾಟಕದ ವ್ಯಾಪ್ತಿಯನ್ನು ಹೇಳಿತ್ತು. ಅದರಂತೆ ರಾಜ್ಯದ 20668 ಚದರ ಕಿ.ಮೀ ಒಳಗೊಂಡಿದೆ. ಅಂದರೆ ಕರುನಾಡಿನ ಸಾವಿರಾರು ಹಳ್ಳಿಯ ಜನರ ಬದುಕು ಬೀದಿಗೆ ಬೀಳುವಂತಾಗುತ್ತದೆ.

Kasturirangan report on Western Ghats Eco-sensitive Area; Affected Villages List in Udupi District

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿರುವ ಹಳ್ಳಿಗಳು; ಉಡುಪಿ ಜಿಲ್ಲೆಯ ಕಾರ್ಕಳದಲ್ಲಿರುವ ಬೆಳೆಂಜೆ, ನಾಡ್ಪಾಲು, ಕುಚ್ಚುರ್, ಚರಾ, ಹೆಬ್ರಿ, ಕಬ್ಬಿನಾಲೆ, ಅಂದರು, ಶಿರ್‍ಲಾಲ್, ಕೆರ್‍ವಾಶೆ, ದುರ್‍ಗಾ, ಮಾಲಾ, ಏಡು, ನೂರಾಲ್ ಬೆಟ್ಟ, ಎಂಬ ಹಳ್ಳಿಗಳು ಪಶ್ಚಿಮ ಘಟ್ಟದಲ್ಲಿನ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ.

Kasturirangan report on Western Ghats Eco-sensitive Area; Affected Villages List in Udupi District

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿರುವ ಹಳ್ಳಿಗಳು; ಉಡುಪಿ ಜಿಲ್ಲೆಯ ಕುಂದಾಪುರದಲ್ಲಿರುವ ಹೊಸೂರ್, ಬೈಂದೂರ್, ಕೊಲ್ಲೂರ್, ಯೆಲ್ಜಿತ್, ಯೆಲ್ಜಿತ್, ತಗರಸಿ, ಮುಡೂರ್, ಗಾಳಿಹೊಳೆ, ಜಡ್ಕಲ್, ಇಡೂರ್ ಕುನ್ಹಾಡಿ, ಕೆರಡಿ, ಹಳ್ಳಿ ಹೊಳೆ, ಅಲೂರ್, ಚಿಟ್ಟೂರ್, ಎಡ್ಮೊಗೆ, ಬೆಲ್ಲಲ್, ವಂದ್ಸೆ, ಹೊಸಂಗಾಡಿ, ಮಚಟ್ಟು, ಅಮಾಸಬೈಲು, ಅಮಾಸೆಬೇಲು, ಶೇದಿಮನೆ, ಮಾದಮ್ಮಕ್ಕಿ, ಬೆಲ್ವೆ ಹಳ್ಳಿಗಳು ಪಶ್ಚಿಮ ಘಟ್ಟದಲ್ಲಿನ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದ್ದೂ ಕಸ್ತೂರಿ ರಂಗನ್ ವರದಿ ಜಾರಿಯಾದರೇ ಈ ಹಳ್ಳಿಗಳಿಗೆ ಅಪತ್ತು ಎದುರಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+