• search
 • Live TV
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಸ್ತೆ ಅಪಘಾತದಲ್ಲಿ ಕೆಎಂಎಫ್ ನಿರ್ದೇಶಕ ರಾಜೀವ ಶೆಟ್ಟಿ ಸಾವು

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಡಿಸೆಂಬರ್ 9: ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಬುಧವಾರ ಸಾವನ್ನಪ್ಪಿದ್ದಾರೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಹಾಲಾಡಿ ಬಳಿ ರಸ್ತೆ ಅಪಘಾತ ನಡೆದಿದ್ದು, ಈ ವೇಳೆ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತಪಟ್ಟಿದ್ದಾರೆ.

ಶಂಕರನಾರಾಯಣದಲ್ಲಿ ಕಾರ್ಯಕ್ರಮ ಮುಗಿಸಿ ಹಾಲಾಡಿಗೆ ಬರುತ್ತಿರುವಾಗ, ಹಾಲಾಡಿಯಲ್ಲಿ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಾಜೀವ ಶೆಟ್ಟಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆತರುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

Udupi: KMF Director Haddur Rajiva Shetty Dies In Road Accident
   Shimoga: ಗ್ರಾಮದಲ್ಲಿ ಪತ್ತೆಯಾಯ್ತು 8 ಅಡಿ ಉದ್ದದ ಕಾಳಿಂಗ ಸರ್ಪ! | Oneindia Kannada

   ಪ್ರಸ್ತುತ ಕೆಎಂಎಫ್ ನ ನಿರ್ದೇಶಕರಾಗಿರುವ ಹದ್ದೂರು ರಾಜೀವ ಶೆಟ್ಟಿ ಅವರು ಶಂಕರನಾರಾಯಣ ತಾಲೂಕು ಪಂಚಾಯತಿಯ ಸದಸ್ಯರಾಗಿದ್ದರು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

   English summary
   Hadduru Rajeev Shetty, director of Dakshina Kannada Cooperative Milk Producers' Union, died in a road accident on Wednesday.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X