ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ: ಕೊಲ್ಲೂರು ಮೂಕಾಂಬಿಕಾ ದೇವಾಲಯದ ಮಹತ್ವದ ಪ್ರಕಟಣೆ

|
Google Oneindia Kannada News

ಉಡುಪಿ, ಮಾರ್ಚ್ 15: ವಿಶ್ವವನ್ನೇ ಆತಂಕಕ್ಕೆ ದೂಡಿರುವ ಕೊರೊನಾ ಮಹಾಮಾರಿಯಿಂದಾಗಿ ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಬಹುತೇಕ ಜಿಲ್ಲೆಗಳಲ್ಲಿ ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಕಲಬುರಗಿಯಲ್ಲಿ ಜಿಲ್ಲಾಡಳಿತ 'ತುರ್ತು ಕೆಲಸವಿದ್ದರೆ ಮಾತ್ರ ಮನೆಯಿಂದ ಹೊರಗೆ ಬನ್ನಿ' ಎನ್ನುವ ಹೇಳಿಕೆಯನ್ನು ನೀಡಿದೆ.

ಉಡುಪಿಯಲ್ಲಿ ಮೂವರಲ್ಲೂ ಕೊರೊನಾ ಉಡುಪಿಯಲ್ಲಿ ಮೂವರಲ್ಲೂ ಕೊರೊನಾ "ನೆಗೆಟಿವ್"

ಕೊರೊನಾ ಭೀತಿ ಧಾರ್ಮಿಕ ಕ್ಷೇತ್ರಗಳಿಗೂ ತಟ್ಟಿದೆ. ಕುಕ್ಕೇ, ಕೊಲ್ಲೂರು, ಕಟೀಲು, ಮಂದರ್ತಿ, ಮಲೇ ಮಹಾದೇಶ್ವರ ದೇವಸ್ಥಾನ ಸೇರಿದಂತೆ, ಪ್ರಮುಖ ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ಕಮ್ಮಿಯಾಗಿದೆ.

Kolluru Temple Administration Requested Devotees Postpone Their Trip For A Week

ದಕ್ಷಿಣಭಾರತದ ಪ್ರಮುಖ ದೇವಾಲಯ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಾಲಯದ ಆಡಳಿತಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಭಕ್ತರಲ್ಲಿ ಮನವಿಯೊಂದನ್ನು ಮಾಡಿದ್ದಾರೆ.

ದೇವಾಲಯಕ್ಕೆ ಭೇಟಿ ನೀಡುವ ಭಕ್ತರು ತಮ್ಮ ಪ್ರವಾಸವನ್ನು ಒಂದು ವಾರ ಮುಂದೂಡುವಂತೆ ದೇವಾಲಯದ ಆಡಳಿತ ಮಂಡಳಿ ಭಕ್ತರಲ್ಲಿ ಮನವಿ ಮಾಡಿದೆ.

ಕೊರೊನಾ ಭೀತಿ; ಕರ್ನಾಟಕ 9 ಮೃಗಾಲಯಗಳು ಬಂದ್ಕೊರೊನಾ ಭೀತಿ; ಕರ್ನಾಟಕ 9 ಮೃಗಾಲಯಗಳು ಬಂದ್

ಕೊರೊನಾ ವೈರಸ್ ರಾಜ್ಯದಲ್ಲೂ ಹರಡುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ಈ ಮನವಿಯನ್ನು ಮಾಡಲಾಗಿದೆ ಎಂದು ದೇವಾಲಯದ ಸಿಇಒ ಹೇಳಿದ್ದಾರೆ.

English summary
Kolluru Temple Administration Requested Devotees Postpone Their Trip For A Week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X