• search
  • Live TV
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊಲ್ಲೂರು ದೇವಸ್ಥಾನದ ವತಿಯಿಂದ ಯಕ್ಷಗಾನ ಕಲಾವಿದರಿಗೆ ನೆರವು

By ಉಡುಪಿ ಪ್ರತಿನಿಧಿ
|

ಉಡುಪಿ, ಮೇ 09: ಲಾಕ್ ಡೌನ್ ನಿಂದಾಗಿ ಯಕ್ಷಗಾನ ತಿರುಗಾಟ ಇಲ್ಲದೆ ಕರಾವಳಿಯಲ್ಲಿ ಸಾವಿರಾರು ಕಲಾವಿದರು ಸಮಸ್ಯೆಗೆ ಒಳಗಾಗಿದ್ದಾರೆ. ಇಂತಹ 1800 ಯಕ್ಷಗಾನ ಕಲಾವಿದರ ನೆರವಿಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಬಂದಿದೆ.

ಇಂದು ದೇವಸ್ಥಾನದ ವತಿಯಿಂದ ಯಕ್ಷಗಾನ ಕಲಾವಿದರಿಗೆ ದಿನಸಿ ಕಿಟ್ ಗಳ ವಿತರಣೆ ನಡೆಯಿತು. ಸುಮಾರು 20 ಲಕ್ಷ ಮೌಲ್ಯದ ಆಹಾರದ ಕಿಟ್ ಗಳನ್ನು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸಾಂಕೇತಿಕವಾಗಿ ವಿತರಣೆ ಮಾಡಿದರು.

ದೇವಸ್ಥಾನದ ಅರ್ಚಕರ ನೆರವಿಗೆ ಬಂದ ರಾಜ್ಯ ಸರ್ಕಾರ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಉಡುಪಿ ಹೀಗೆ ನಾಲ್ಕು ಜಿಲ್ಲೆಗಳ ಕಲಾವಿದರು ಇದರಲ್ಲಿ ಸೇರಿದ್ದಾರೆ. ಉಡುಪಿಯ ಯಕ್ಷಗಾನ ಕಲಾರಂಗ ಸಂಸ್ಥೆಯ ನೇತೃತ್ವ ದಲ್ಲಿ ಈ ಕಾರ್ಯಕ್ರಮ ನಡೆಯಿತು. ಆಹಾರ ಸಾಮಗ್ರಿ ವಿತರಿಸಿ ಮಾತನಾಡಿದ ಮೀನುಗಾರಿಕಾ, ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಯಕ್ಷಗಾನ ಕ್ಷೇತ್ರದಲ್ಲಿ ಸಾವಿರಾರು ಕಲಾವಿದರು ಇನ್ನೂ ಬಡತನದಲ್ಲಿದ್ದಾರೆ. ಯಕ್ಷಗಾನ ಸೇವೆ ನಡೆದರೆ ಅವರ ಹೊಟ್ಟೆ ತುಂಬುವ ಪರಿಸ್ಥಿತಿ ಇದೆ. ಯಕ್ಷಗಾನದಲ್ಲಿ ಕಲಾವಿದರು ಕಷ್ಟದಲ್ಲಿರುವಾಗ ಅವರ ಕೈ ಹಿಡಿಯುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು.

English summary
Kolluru temple came to help yakshagana artists who are facing problem due to lockdown,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X