ಬಿಜೆಪಿ ಶಾಸಕರ ಸಂಖ್ಯೆ 115ಕ್ಕೆ ಏರಿಕೆಯಾಗಲಿದೆ : ಶ್ರೀನಿವಾಸ ಪೂಜಾರಿ

ಉಡುಪಿ, ಜನವರಿ 18 : 'ನಿಮ್ಮ ಶಾಸಕರನ್ನು ಗಟ್ಟಿಯಾಗಿ ಹಿಡಿದುಕೊಳ್ಳಿ. ಈಗಿರುವ ಬಿಜೆಪಿ ಶಾಸಕರ ಸಂಖ್ಯೆ 106 ರಿಂದ 115ಕ್ಕೆ ಏರಿಕೆಯಾದರೆ ಅದಕ್ಕೆ ನೀವೇ ಹೊಣೆ' ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಶುಕ್ರವಾರ ಉಡುಪಿಯಲ್ಲಿ ಮಾತನಾಡಿದ ಕೋಟಾ ಶ್ರೀನಿವಾಸ ಪೂಜಾರಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. '104 ಇದ್ದ ಬಿಜೆಪಿ ಶಾಸಕರ ಸಂಖ್ಯೆ ಈಗ 106ಕ್ಕೆ ಏರಿಕೆಯಾಗಿದೆ' ಎಂದರು.

'ನಿಮ್ಮ ಶಾಸಕರನ್ನು ಭದ್ರವಾಗಿ ಹಿಡಿದಿಟ್ಟುಕೊಳ್ಳಿ. ಕಾಂಗ್ರೆಸ್ ಶಾಸಕರ ಬಗ್ಗೆ ಅವರಿಗೆ ಅನುಮಾನವಿದೆ. ಸಿಎಲ್‌ಪಿ ಸಭೆಯಲ್ಲಿ ಏನಾಗುತ್ತದೋ?' ಮುಂದೆ ನೋಡೋಣ ಎಂದು ತಿಳಿಸಿದರು.

Kota Srinivas Poojary statement on operation kamala

'ನಿಮ್ಮ ಶಾಸಕರನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳಿ. ಬಿಜೆಪಿಯ ಈಗಿರುವ ಶಾಸಕರ ಸಂಖ್ಯೆ 106, 115ಕ್ಕೆ ಏರಿಕೆಯಾದರೆ ಅದಕ್ಕೆ ನೀವೇ ಹೊಣೆ' ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದರು.

ಬಿ.ಕೆ.ಹರಿಪ್ರಸಾದ್ : ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, 'ಕಾಂಗ್ರೆಸ್ ನಾಯಕರು ಜವಾಬ್ದಾರಿಯಿಂದ ಮಾತನಾಡಲಿ. ಬಿ.ಕೆ.ಹರಿಪ್ರಸಾದ್ ಅವರಿಗೆ ಮಾತಿನ ಮೇಲೆ ನಿಗಾ ಇರಲಿ' ಎಂದರು.

'ಆಪರೇಷನ್ ಕಮಲ ಮಾಡಲು ಹೊರಟಿದ್ದಕ್ಕೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಹಂದಿ ಜ್ವರ ಬಂದಿದೆ' ಎಂದು ಬಿ.ಕೆ.ಹರಿಪ್ರಸಾದ್ ಅವರು ಗುರುವಾರ ಹೇಳಿಕೆ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+