• search
  • Live TV
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಮಲಶಿಲೆ, ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ಡಿ.ಕೆ ಶಿವಕುಮಾರ್

By ಉಡುಪಿ ಪ್ರತಿನಿಧಿ
|

ಉಡುಪಿ, ನವೆಂಬರ್ 29: ಉಡುಪಿ ಜಿಲ್ಲೆಗೆ ಆಗಮಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರವಾಸಕ್ಕೂ ಮುನ್ನ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಮತ್ತು ಕಮಲಶಿಲೆ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವರ ದರ್ಶನ ಪಡೆದರು.

ಶನಿವಾರ ರಾತ್ರಿ ಉಡುಪಿ ಜಿಲ್ಲೆಗೆ ಆಗಮಿಸಿದ ಡಿ.ಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಕಮಲಶಿಲೆ ದೇವಸ್ಥಾನಕ್ಕೆ ತೆರಳಿ ಪೂಜೆಯಲ್ಲಿ ಪಾಲ್ಗೊಂಡರು. ನಂತರ ಅನ್ನ ಪ್ರಸಾದ ಸೇವಿಸಿ ಬಳಿಕ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿದರು.

ಶ್ರೀ ಕೃಷ್ಣಮಠದಲ್ಲಿ ಪರ್ಯಾಯ ಶ್ರೀಗಳಿಂದ ಭಕ್ತರಿಗೆ ತಪ್ತಮುದ್ರಾಧಾರಣೆ

ಕೊಲ್ಲೂರಿನಲ್ಲೇ ತಂಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಬೆಳಿಗ್ಗೆ ಮೂಕಾಂಬಿಕಾ ದೇವಿ ದರ್ಶನ ಪಡೆದು, ವಿಶೇಷ ಪೂಜೆಯಲ್ಲಿ ಭಾಗಿಯಾದರು.

ಭಾನುವಾರ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಆಯೋಜನೆಗೊಂಡಿದ್ದು, ಬಳಿಕ ಡಿಸಿಸಿ ಕಚೇರಿಯಲ್ಲೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಜೊತೆ ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ.

ಡಿ.ಕೆ. ಶಿವಕುಮಾರ್ ಅವರಿಗೆ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು ಮತ್ತಿತರರು ಹಾಜರಿದ್ದರು.

English summary
DK Shivakumar arrived in Udupi district on Saturday night, was greeted by Congress leaders and activists.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X