ಬೈಂದೂರಿನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಪ್ರೌಢಶಾಲೆ ಮುಖ್ಯೋಪಾಧ್ಯಾರ ಬಂಧನಕ್ಕೆ ತೀವ್ರ ಆಗ್ರಹ
ಉಡುಪಿ, ಮೇ 21: ಪಿಯುಸಿ ಸೇರ್ಪಡೆಯಾಗಲು ಶಾಲೆಯಲ್ಲಿ ಟಿ.ಸಿ ಕೊಡಲಿಲ್ಲ ಎಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ನಿತಿನ್ ಆಚಾರಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಬೈಂದೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ನಿತಿನ್ ಈ ಬಾರಿಯ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ. ಈ ಹಿನ್ನೆಲೆಯಲ್ಲಿ ಮುಂದಿನ ವಿದ್ಯಾಭ್ಯಾಸ ಪಿಯುಸಿ ಸೇರ್ಪಡೆಯಾಗಲು ಟಿ.ಸಿ ಪಡೆಯಲು ಬೈಂದೂರು ಸರಕಾರಿ ಪ್ರೌಢಶಾಲೆಗೆ ಬಂದಿದ್ದಾನೆ.

ಈ ವೇಳೆ ಮುಖ್ಯೋಪಾಧ್ಯಾಯ ಸುರೇಶ್ ಭಟ್ ಬೈದಿದ್ದಾರೆ, ಅವಮಾನಿಸಿದ್ದಾರೆ ಎಂದು ಡೆತ್‌ನೋಟ್ ಬರೆದಿಟ್ಟು, ನಿತಿನ್ ಮನೆಯಲ್ಲಿ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಿತಿನ್ ಬರೆದಿದ್ದಾನೆ ಎನ್ನಲಾದ ಡೆತ್‌ನೋಟ್ ಕೂಡ ಪತ್ತೆಯಾಗಿದೆ.
ವಿದ್ಯಾರ್ಥಿ ನಿತಿನ್ ಆಚಾರಿ (16) ಆತ್ಮಹತ್ಯೆ ಖಂಡಿಸಿ ಸ್ಥಳೀಯರು ಹಾಗೂ ಸ್ಥಳೀಯ ಸಂಘಟನೆಗಳ ಮುಖಂಡರು ಬೈಂದೂರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಟಿ.ಸಿ ಕೇಳಲು ಹೋದ ವಿದ್ಯಾರ್ಥಿ ಮನನೊಂದು ಸಾವಿಗೆ ಶರಣಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಬೈಂದೂರು ಸರಕಾರಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ಭಟ್‌ರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
ಹಾಜಬ್ಬರ ಶಾಲೆಯಲ್ಲಿ ತಡೆಗೋಡೆ ಕುಸಿದು ಬಾಲಕಿ ಸಾವು
ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ನ್ಯೂಪಡ್ಪು ನಿವಾಸಿ ಸಿದ್ದೀಖ್ ಜಮೀಲಾ ಪುತ್ರಿ ಶಾಜಿಯಾ (7) ಮೃತ ಬಾಲಕಿ ಎಂದು ಗುರುತಿಸಲಾಗಿದೆ.

ನ್ಯೂಪಡ್ಪು ಹಾಜಬ್ಬರ ಶಾಲೆಯಲ್ಲಿ 3ನೇ ತರಗತಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಶಾಜಿಯಾ ಶಾಲೆಯಲ್ಲಿ ನಡೆಯುತ್ತಿದ್ದ ಎನ್‌ಎಸ್ಎಸ್ ಶಿಬಿರದಲ್ಲಿ ಭಾಗಿಯಾಗಿದ್ದಳು. ಗೇಟಿನ ಬಳಿ ಆಟವಾಡುತ್ತಿರುವಾಗ, ಮಳೆಗೆ ನೆನೆದಿದ್ದ ಶಾಲೆಯ ತಡೆಗೋಡೆ ಏಕಾಏಕಿ ಕುಸಿದಿದ್ದು, ಬಾಲಕಿ ತಡೆಗೋಡೆಯ ಕೆಳಗೆ ಸಿಲುಕಿ ಸಾವನ್ನಪ್ಪಿದ್ದಾಳೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಕಟ್ಟಿದ ನ್ಯೂಪಡ್ಪು ಶಾಲೆಯಲ್ಲಿ ಈ ದುರಂತ ನಡೆದಿದೆ.












Click it and Unblock the Notifications