Kundapura: ಶಿಷ್ಯನಿಗೆ ಕುಂದಾಪುರದ ಚಕ್ರಾಧಿಪತ್ಯ ಬಿಟ್ಟು ಕೊಟ್ಟ ಹಾಲಾಡಿ: ಕಂಡೀಷನ್ ಅಪ್ಲೈ
ಉಡುಪಿ, ಏಪ್ರಿಲ್ 03: ಜಿಲ್ಲೆಯ ರಾಜಕೀಯದಲ್ಲಿನ ಆಶ್ಚರ್ಯಕಾರಿ ಬೆಳವಣಿಗೆಯೊಂದರಲ್ಲಿ ಕುಂದಾಪುರದ ವಾಜಪೇಯಿ ಎಂದೇ ಕರೆಯಲ್ಪಡುವ ಹಾಲಾಡಿ ಶ್ರೀನಿವಾಸ ಶೆಟ್ಟಿ (Haladi Srinivas Shetty) ಸಕ್ರಿಯ ರಾಜಕಾರಕ್ಕೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ. ಆದರೆ, ಈ ನಿರ್ಧಾರ ತೆಗೆದುಕೊಳ್ಲಬೇಕಾದರೆ ರಾಜ್ಯ ಬಿಜೆಪಿಗೆ ಕಂಡೀಷನ್ ಒಂದನ್ನು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.
ತಮ್ಮ ಸರಳತೆಯಿಂದ ಕರಾವಳಿ ಭಾಗದಲ್ಲಿ ಹೆಸರುವಾಸಿಯಾಗಿರುವ ಹಾಲಾಡಿ ಶೆಟ್ರು, ಕುಂದಾಪುರದ ಜನತೆಗೆ ಭಾವುಕ ಪತ್ರವೊಂದನ್ನು ಬರೆದಿದ್ದಾರೆ. ಐದು ಬಾರಿ ನನ್ನನ್ನು ಆಶೀರ್ವಾದಿಸಿದ ಜನತೆಗೆ ನಾನು ಚಿರಖುಣಿ ಎಂದಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಹಾಲಾಡಿ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ತಮ್ಮ ರಾಜಕೀಯ ಗುರು ದಿ.ಎ.ಜಿ.ಕೊಡ್ಗಿಯವರ ಪುತ್ರ ಮತ್ತು ತಮ್ಮ ಬಲಗೈ ಬಂಟ ಕಿರಣ ಕೊಡ್ಗಿಯವರಿಗೆ ಕ್ಷೇತ್ರವನ್ನು ಬಿಟ್ಟು ಕೊಡಲು ಹಾಲಾಡಿ ಶ್ರೀನಿವಾಸ ಶೆಟ್ಟಿ ನಿರ್ಧರಿಸಿದ್ದಾರೆ. ಆ ಮೂಲಕ, ರಾಜಕೀಯದಲ್ಲಿ ಈ ಮಟ್ಟಕ್ಕೆ ಬೆಳೆಸಿದ ಗುರುವಿನ ಖುಣವನ್ನು ಹಾಲಾಡಿ ತೀರಿಸಲು ಮುಂದಾಗಿದ್ದಾರೆ. ಹಾಲಾಡಿಯವರ ನಿರ್ಧಾರಕ್ಕೆ ಬಿಜೆಪಿ ವರಿಷ್ಠರೂ ಒಪ್ಪಿಗೆ ಸೂಚಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
"ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಸತತವಾಗಿ ಐದು ಅವಧಿಗೆ ನನ್ನನ್ನು ಬಹುನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ನನ್ನ ಕ್ಷೇತ್ರದ ಎಲ್ಲಾ ಜಾತಿ, ಧರ್ಮದ ಮತದಾರ ಬಾಂಧವರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತಿದ್ದೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ವಇಚ್ಚೆಯಿಂದ ಸ್ಪರ್ಧಿಸದೇ ಇರಲು ನಿಶ್ಚಯಿಸಿರುತ್ತೇನೆ"ಎಂದು ಹಾಲಾಡಿಯವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಈ ನಿರ್ಧಾರದಿಂದ ಬಿಜೆಪಿಯ ಭದ್ರಕೋಟೆ ಕುಂದಾಪುರದಲ್ಲಿ ಕಿರಣ್ ಕೊಡ್ಗಿಯವರ ಹೆಸರು ಬಹುತೇಕ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆಯಿದೆ. ಕುಂದಾಪುರ ಕ್ಷೇತ್ರಕ್ಕೆ ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು ಎಂ. ದಿನೇಶ್ ಹೆಗ್ಡೆ ಇಲ್ಲಿಂದ ಸ್ಪರ್ಧಿಸಲಿದ್ದಾರೆ.
ಹಾಲಾಡಿಯವರ ಸಕ್ರಿಯ ರಾಜಕಾರಣದಿಂದ ದೂರ ಸರಿಯುವ ನಿರ್ಧಾರದಿಂದಾಗಿ ಅವರ ಅಭಿಮಾನಿಗಳ ಹಾಲಾಡಿ ಸಚಿವರಾಗಬೇಕು ಎನ್ನುವ ಕನಸು, ಕನಸಾಗಿಯೇ ಉಳಿದಿದೆ. ಮಂತ್ರಿಗಿರಿಗಾಗಿ ಬೆಂಗಳೂರು ಸುತ್ತುವುದಿಲ್ಲ, ಪ್ರಮುಖ ಮುಖಂಡರ ಮನೆ ಬಳಿ ಹೋಗುವುದಿಲ್ಲ ಎಂದು ಯಡಿಯೂರಪ್ಪನವರ ಸರಕಾರ ಅಧಿಕಾರಕ್ಕೆ ಬಂದ ವೇಳೆ ಹಾಲಾಡಿ ಶೆಟ್ರು ಹೇಳಿದ್ದರು.
'ಕ್ಷೇತ್ರದ ಅಭಿವೃದ್ಧಿಯ ವಿಚಾರದಲ್ಲಿ ನನಗೆ ಮಾರ್ಗದರ್ಶನ ನೀಡಿದ ಹಾಗೂ ಸಹಕಾರ ನೀಡಿದ ಪಕ್ಷದ ಪ್ರಮುಖರಿಗೆ, ಎಲ್ಲ ಹಿರಿ- ಕಿರಿಯ ಸ್ನೇಹಿತರಿಗೆ, ಅಧಿಕಾರಿ ವರ್ಗದವರಿಗೆ, ಮಾಧ್ಯಮದವರಿಗೆ ಹಾಗೂ ಕ್ಷೇತ್ರದ ಎಲ್ಲ ಮತದಾರರಿಗೂ ನನ್ನ ಮನ:ಪೂರ್ವಕ ಕೃತಜ್ಞತೆಗಳು.
'ಮತದಾರರು ನನ್ನ ಮೇಲೆ ಇಟ್ಟ ಪ್ರೀತಿ ಮತ್ತು ನಂಬಿಕೆಯೇ ನಾನು ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರವಾಗಿ ಕರ್ತವ್ಯ ನಿರ್ವಹಿಸಲು ಪ್ರೇರಣೆಯಾಗಿದ್ದು'.
'ಅದಕ್ಕಾಗಿ ನಾನು ನನ್ನ ಸಮಸ್ತ ಮತಬಾಂಧವರಿಗೂ ಮತ್ತೊಮ್ಮೆ ಕೃತಜ್ಞತೆಯನ್ನು ಸಲ್ಲಿಸುತ್ತಾ, ನಾನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಭಾರತೀಯ ಜನತಾ ಪಾರ್ಟಿಯಿಂದ ಆಯ್ಕೆಯಾಗಲು ಅವಕಾಶ ಕೊಟ್ಟ ಪಕ್ಷಕ್ಕೂ ಹಾಗೂ ನಾನು ಪಕ್ಷೇತರರಾಗಿ ನಿಂತು ಗೆಲ್ಲಲು ಸಹಕರಿಸಿದ ಎಲ್ಲರಿಗೂ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತಿದ್ದೇನೆ'.
'ಈ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗೆ ಎಲ್ಲಾ ಮತಬಾಂಧವರೂ ಸಹಕಾರ ನೀಡಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ' ಎಂದು ಹಾಲಾಡಿ ಶ್ರೀನಿವಾಸ ಶೆಟ್ಟಿ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಬರೆದುಕೊಂಡಿದ್ದಾರೆ'.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications