ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಗೆ ಹೊಸ ಡಿಸಿ; ಜಿ. ಜಗದೀಶ್ ವರ್ಗಾವಣೆ

|
Google Oneindia Kannada News

ಉಡುಪಿ, ಆಗಸ್ಟ್ 30; ಕರ್ನಾಟಕ ಸರ್ಕಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ. ಜಗದೀಶ್‌ರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಭಾನುವಾರ ಕರ್ನಾಟಕ ಸರ್ಕಾರ ಐಎಎಸ್ ಅಧಿಕಾರಿಗಳ ವರ್ಗಾವಣೆ ಕುರಿತು ಆದೇಶ ಹೊರಡಿಸಿದೆ. ಉಡುಪಿಯ ನೂತನ ಜಿಲ್ಲಾಧಿಕಾರಿಯಾಗಿ ಎಂ. ಕೂರ್ಮರಾವ್ ನೇಮಕಗೊಂಡಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕಲಬುರಗಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಎಂ. ಕೂರ್ಮರಾವ್ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.

ಉಡುಪಿ; ಕೊರೊನಾ ನಿಯಮ ಉಲ್ಲಂಘನೆ, ಜಿಲ್ಲಾಧಿಕಾರಿ ಮೌನ! ಉಡುಪಿ; ಕೊರೊನಾ ನಿಯಮ ಉಲ್ಲಂಘನೆ, ಜಿಲ್ಲಾಧಿಕಾರಿ ಮೌನ!

ಕೆಎಎಸ್ ಅಧಿಕಾರಿಯಾಗಿದ್ದ ಜಿ. ಜಗದೀಶ್ 2018ರಲ್ಲಿ ಐಎಎಸ್ ಅಧಿಕಾರಿಯಾಗಿ ಬಡ್ತಿ ಪಡೆದಿದ್ದರು. 2019ರ ಆಗಸ್ಟ್‌ 20ರಂದು ಉಡುಪಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು.

ಉಡುಪಿ; ಅಷ್ಟಮಿಯ ಸಂಭ್ರಮಕ್ಕೆ ನೂರೆಂಟು‌ ನಿಯಮಗಳು!ಉಡುಪಿ; ಅಷ್ಟಮಿಯ ಸಂಭ್ರಮಕ್ಕೆ ನೂರೆಂಟು‌ ನಿಯಮಗಳು!

Deputy Commissioner Of Udupi

ಕೋವಿಡ್, ಮಳೆ, ಚಂಡಮಾರುತದ ಪರಿಸ್ಥಿತಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಜಿ. ಜಗದೀಶ್ ಎರಡು ವರ್ಷಗಳನ್ನು ಪೂರೈಸಿದ್ದು, ಭಾನುವಾರ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶವನ್ನು ಹೊರಡಿಸಿದೆ.

ಉಡುಪಿ; ಬಿ. ಆರ್. ಶೆಟ್ಟಿ ಆಸ್ಪತ್ರೆ ಸರ್ಕಾರದ ಸುರ್ಪದಿಗೆ ಉಡುಪಿ; ಬಿ. ಆರ್. ಶೆಟ್ಟಿ ಆಸ್ಪತ್ರೆ ಸರ್ಕಾರದ ಸುರ್ಪದಿಗೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯಡಿಯೂರಪ್ಪ ಸಂಪುಟದಲ್ಲಿ ಗೃಹ ಸಚಿವರಾಗಿದ್ದಾಗ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಈಗ ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆ ಉಡುಪಿ ಜಿಲ್ಲಾಧಿಕಾರಿಗಳ ವರ್ಗಾವಣೆಯಾಗಿದೆ.

ಜಿ. ಜಗದೀಶ್ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದರೂ ಅವರ ವಿರುದ್ಧ ಹಲವು ಟೀಕೆಗಳು ಕೇಳಿ ಬಂದಿತ್ತು. ಕೋವಿಡ್ ಮಾರ್ಗಸೂಚಿ ಪಾಲನೆ ಸಂದರ್ಭದಲ್ಲಿ ಅವರು ತೆಗೆದುಕೊಂಡ ಕೆಲವು ತೀರ್ಮಾನಗಳು ಚರ್ಚೆಗೆ ಕಾರಣವಾಗಿತ್ತು.

ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಹಬ್ಸಿಪಾ ರಾಣಿ ಕೊರ್ಲಾಪಟಿ ವರ್ಗಾವಣೆಗೊಂಡ ಬಳಿಕ ಜಿ. ಜಗದೀಶ್ ಜಿಲ್ಲಾಧಿಕಾರಿಯಾಗಿದ್ದರು. ಈಗ ಅವರು ಸಹ ವರ್ಗಾವಣೆಗೊಂಡಿದ್ದು, ಕೂರ್ಮಾರಾವ್ ಎಂ. ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

2018ರ ಆಗಸ್ಟ್ 1ರಂದು ಎಂ. ಕೂರ್ಮಾರಾವ್ ಯಾದಗಿರಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಅವರನ್ನು 2020ರಲ್ಲಿ ವರ್ಗಾವಣೆ ಮಾಡಲಾಗಿತ್ತು. ಡಾ. ರಾಗಪ್ರಿಯರನ್ನು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. ಬಳಿಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕಲಬುರಗಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಎಂ. ಕೂರ್ಮಾರಾವ್ ನೇಮಕಗೊಂಡಿದ್ದರು.

ಜಿ. ಜಗದೀಶ್‌ ಪರಿಚಯ; ಜಿ. ಜಗದೀಶ್‌ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಜಿ. ಜಗದೀಶ್ ಪೊಲಿಟಿಕಲ್ ಸೈನ್ಸ್ ವಿಷಯದಲ್ಲಿ ಪದವಿ ಪಡೆದಿದ್ದಾರೆ. ಬಿ. ಎಡ್. ಪದವಿ ಪಡೆದಿರುವ ಅವರು ಕಡೂರಿನಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾಗಿ ಎರಡು ವರ್ಷ ಕಾರ್ಯ ನಿರ್ವಹಣೆ ಮಾಡಿದ್ದರು.

ಕೆಎಎಸ್ ಪರೀಕ್ಷೆ ಉತ್ತೀರ್ಣಗೊಂಡ ಬಳಿಕ ಅವರು ಸವಣೂರು, ಶಿರಸಿ ಎಸಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದರು. ಹಾವೇರಿ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದರು. ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ, ಹಾಸನ ಮತ್ತು ಕೋಲಾರ ಜಿಲ್ಲಾ ಪಂಚಾಯಿತಿ ಸಿಇಓ ಆಗಿ ಕೆಲಸ ಮಾಡಿದ್ದಾರೆ.

ಜಿ. ಜಗದೀಶ್ 2018ರಲ್ಲಿ ಐಎಎಸ್ ಅಧಿಕಾರಿಯಾಗಿ ಬಡ್ತಿ ಪಡೆದರು. 2019ರ ಆಗಸ್ಟ್‌ 20ರಂದು ಉಡುಪಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ಕೋವಿಡ್ ಸಂದರ್ಭದಲ್ಲಿ ಜಿ. ಜಗದೀಶ್ ಮಾತ್ರ ಕೊರೊನಾ ಕಾನೂನುಗಳನ್ನು ಬಡವರ ಮೇಲೆ ಮಾತ್ರ ಹೇರಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿದ್ದವು.

ಉಡುಪಿ ಜಿಲ್ಲೆಯಲ್ಲಿ ಮೇಲಿಂದ ಮೇಲೆ ಕೊರೊನಾ ನಿಯಮ ಉಲ್ಲಂಘನೆ ಪ್ರಕರಣಗಳು ನಡೆಯುತ್ತಿದ್ದರೂ, ಜಿಲ್ಲಾಧಿಕಾರಿ ಜಗದೀಶ್ ಮಾತ್ರ ಈ ಹಿಂದಿನಂತೆ ನಿಯಮ ಉಲ್ಲಂಘಿಸಿದವರ ವಿರುದ್ಧ ಸಮರ ಸಾರುತ್ತಿಲ್ಲ. ಸಿರಿವಂತರು ನಿಯಮ‌ ಮೀರುತ್ತಿದ್ದರೂ ಜಿಲ್ಲಾಧಿಕಾರಿಗಳು ಮೌನವಾಗಿದ್ದಾರೆ ಎಂದು ದೂರಲಾಗಿತ್ತು.

Recommended Video

Zimbabwe ಮೇಲೆ ಚೀನಾ ಹಿಡಿತ ಸಾಧಿಸಿದ್ದು ಹೇಗೆ? | Oneindia Kannada

ಇತ್ತೀಚೆಗೆ ಲಯನ್ಸ್ ಕ್ಲಬ್‌ನ ಸಮಾರಂಭ ಮತ್ತು ಕುಂದಾಪುರ ತಾಲೂಕಿನ ಕೋಟಾ ಸಮೀಪದ ಇಸಿಆರ್ ಕಾಲೇಜಿನ ವಿದ್ಯಾರ್ಥಿಗಳು ಓಣಂ ಹಬ್ಬವನ್ನು ಕೊರೊನಾ ನಿಯಮಗಳನ್ನು ಪಾಲಿಸದೇ ಆಚರಣೆ ಮಾಡಿದಾಗ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂಬುದು ಭಾರೀ ಸುದ್ದಿಯಾಗಿತ್ತು.

English summary
Karnataka government transferred deputy commissioner of Udupi Jagadeesh. Posted Kurma Rao. M as new deputy commissioner.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X