ದುಬೈಗೆ ತೆರಳುತ್ತಿದ್ದ ಪ್ರಯಾಣಿಕನಿಂದ ಲಕ್ಷಾಂತರ ಮೌಲ್ಯದ ವಿದೇಶಿ ಕರೆನ್ಸಿ ವಶ
ಮಂಗಳೂರು, ಸೆಪ್ಟೆಂಬರ್ 16: ಮಂಗಳೂರು ವಿಮಾನ ನಿಲ್ದಾಣದಿಂದ ದುಬೈಗೆ ತೆರಳುತ್ತಿದ್ದ ಪ್ರಯಾಣಿಕರೊಬ್ಬರಿಂದ 5.88 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ಸಿಐಎಸ್ ಎಫ್ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.
ಹ್ಯಾರಿ ಸ್ಟೀಫನ್ ಆಂಥೋನಿ ಡಿಸೋಜ ಬಂಧಿತ ಆರೋಪಿ. ಭಾನುವಾರ ಸಂಜೆ ದುಬೈಗೆ ತೆರಳುತ್ತಿದ್ದ ಪ್ರಯಾಣಿಕರನ್ನು ಅಧಿಕಾರಿಗಳು ತಪಾಸಣೆ ನಡೆಸಿದ್ದ ಸಂದರ್ಭ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಳ್ಳಲಾಗಿದೆ.

2.93 ಲಕ್ಷ ರೂ. ಮೌಲ್ಯದ ದಿರ್ಹಮ್, 2.94 ರೂ. ಮೌಲ್ಯದ ಡಾಲರ್ ವಿದೇಶಿ ಕರೆನ್ಸಿ ಪತ್ತೆಯಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಕಸ್ಟಮ್ಸ್ ಅಧಿಕಾರಿಗಳಿಗೆ ಈತನನ್ನು ಹಸ್ತಾಂತರಿಸಲಾಗಿದೆ.












Click it and Unblock the Notifications