ಉಡುಪಿ ಬಳಿಕ ಕುಂದಾಪುರದಲ್ಲೂ ಕೋವಿಡ್ ಆಸ್ಪತ್ರೆ ಸೇವೆಗೆ ಸಿದ್ಧ

ಉಡುಪಿ, ಮೇ 22: ಕುಂದಾಪುರದ ಶ್ರೀ ಲಕ್ಷ್ಮೀ ಸೋಮ ಬಂಗೇರ ಸ್ಮಾರಕ ಹೆರಿಗೆ ವಾರ್ಡ್ ಅನ್ನು ಕೋವಿಡ್-19 ಆಸ್ಪತ್ರೆಯಾಗಿ ಪರಿವರ್ತಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈತನಕ ಉಡುಪಿ ನಗರದ ಹೃದಯ ಭಾಗದಲ್ಲಿ ಟಿ.ಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ಜಿಲ್ಲೆಯ ಕೊರೊನಾ ಪಾಸಿಟಿವ್ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು.

Recommended Video

      ತರಕಾರಿಯಿಂದಲು ಹಬ್ಬುತ್ತಿದೆ ಕೊರೋನಾ ಮಹಾಮಾರಿ!! ಎಚ್ಚರ!! | Oneindia Kannada

      ಹೊರ ರಾಜ್ಯಗಳಿಂದ ಬಂದವರಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇವರಿಗೆಲ್ಲ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಈ ನಿರ್ಧಾರ ಕೈಗೊಂಡಿದೆ.

      ಸದ್ಯ ಆಸ್ಪತ್ರೆಯ ಲಕ್ಷ್ಮೀ ಸೋಮ ಬಂಗೇರ ಸ್ಮಾರಕ ವಾರ್ಡ್ ‍ನಲ್ಲಿ ಹೆರಿಗೆಗಾಗಿ ಸೇರ್ಪಡೆಗೊಂಡು ಆರೈಕೆ ಪಡೆದುಕೊಳ್ಳುತ್ತಿರುವವರನ್ನು, ಈ ಹಿಂದೆ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ನಿಂದ ಕೊಡುಗೆಯಾಗಿ ನೀಡಿದ್ದ ಹಳೆಯ ವಾರ್ಡ್ ‍ಗೆ ಸ್ಥಳಾಂತರಿಸಲಾಗಿದೆ. ಬೈಂದೂರು ಹಾಗೂ ಕುಂದಾಪುರ ಭಾಗದ ಜನರಿಗೆ ಪಾಸಿಟಿವ್ ಬಂದಾಗ ಈ ಆಸ್ಪತ್ರೆಯನ್ನು ಬಳಸಿಕೊಳ್ಳಲಾಗುತ್ತದೆ.

      Lakshmi Soma Bangera Memorial Maternity Ward in Kundapur Converted Into Covid Hospital.

      ಉಳಿದಂತೆ ಐಸಿಯು, ವೆಂಟಿಲೇಟರ್, ಆಕ್ಸಿಜನ್ ಬೇಕಾಗುತ್ತದೆಯೋ ಅಂಥವರನ್ನು ಉಡುಪಿಯಲ್ಲಿನ ಟಿಎಂಎ ಪೈ ಆಸ್ಪತ್ರೆಗೆ ಕಳುಹಿಸಲಾಗುತ್ತದೆ. ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಜಿ. ಜಗದೀಶ್, 120 ಹಾಸಿಗೆಗಳುಳ್ಳ ಕೋವಿಡ್-19 ಆಸ್ಪತ್ರೆ ಇಂದಿನಿಂದಲೇ ಸೇವೆಗೆ ಸಜ್ಜುಗೊಂಡಿದೆ. ವೈದ್ಯರು ದಾದಿಯರು ಕೊರೊನಾ ವಾರಿಯರ್ಸ್ ಆಗಿ ಕೆಲಸ ನಿರ್ವಹಿಸಲಿದ್ದು, ಹೆಚ್ಚುವರಿ ಸಿಬ್ಬಂದಿ ಬೇಕಾದಲ್ಲಿ ತಿಳಿಸುವಂತೆ ಈಗಾಗಲೇ ಆಸ್ಪತ್ರೆಯ ವೈದ್ಯಾಧಿಕಾರಿಯವರಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.

      ಈ ನಡುವೆ ಉಡುಪಿಯಲ್ಲಿ ಇಂದು ಮುಂಬೈನಿಂದ ಬಂದ ಮೂವರಲ್ಲಿ ಸೋಂಕು ದೃಢಪಟ್ಟಿದೆ. ಇವರೆಲ್ಲ ಕ್ವಾರಂಟೈನ್ ನಲ್ಲಿದ್ದವರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 50ಕ್ಕೇರಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+