ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಯಲ್ಲಿ ಬೃಹತ್ ಗಾತ್ರದ ತಿಮಿಂಗಲ ಪ್ರತ್ಯಕ್ಷ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಏಪ್ರಿಲ್ 21: ಕೊರೊನಾ ವೈರಸ್ ಮಹಾಮಾರಿ ರೋಗದ ವಿರುದ್ಧ ಹೋರಾಡಲು ಇಡೀ ದೇಶವೇ ಲಾಕ್ ಡೌನ್ ಆದ ಪರಿಣಾಮವಾಗಿ ಎಲ್ಲಾ ಚಟುವಟಿಕೆಗಳಂತೆ ಮೀನುಗಾರಿಕಾ ಚಟುವಟಿಕೆಗಳು ಕೂಡ ಸಂಪೂರ್ಣ ಸ್ಥಗಿತಗೊಂಡಿದೆ.

ಸದ್ಯದ ಪರಿಸ್ಥಿತಿಯಲ್ಲಿ ಬೋಟ್ ಗಳು ಕಡಲಿಗೆ ಇಳಿಯುತ್ತಿಲ್ಲ. ಹಾಗಾಗಿ ಯಾಂತ್ರಿಕ‌ ಬೋಟ್ ಗಳ ಗೌಜು ಗದ್ದಲವಿಲ್ಲದೇ ಕಡಲು ಕೂಡ ಶಾಂತವಾಗಿದೆ. ಉಡುಪಿಯ ಪ್ರಶಾಂತ ಕಡಲಿನಲ್ಲಿ ಭಾರೀ ಗಾತ್ರದ ತಿಮಿಂಗಿಲ ಮೀನು ತೇಲಿಬಂದು ದಡ ಸೇರಿದೆ.

ಉಡುಪಿಯ ಕುತ್ಪಾಡಿ ಗ್ರಾಮದ ಪಡುಕೆರೆ ಕಡಲತೀರದಲ್ಲಿ ಪತ್ತೆಯಾದ ಮೀನು ಕಂಡು ಜನರು ಬೆಚ್ಚಿಬಿದ್ದಿದ್ದಾರೆ. ತೀರ ಪ್ರದೇಶಕ್ಕೆ ಬಂದ ತಿಮಿಂಗಿಲಕ್ಕೆ ಈಜಲು ನೀರು ಸಾಲದೆ ಸಾವನ್ನಪ್ಪಿದೆ.

Large Whale Visible In Udupi

ಸುಮಾರು 25 ಅಡಿ ಉದ್ದದ ಈ ತಿಮಿಂಗಲ ಮೀನು ತೀರ ಪ್ರದೇಶಗಳಲ್ಲಿ ಕಾಣಸಿಗುವುದು ತುಂಬಾನೇ ಅಪರೂಪವೆಂದು ಹೇಳಬಹುದು. ತಿನ್ನಲು ಯೋಗ್ಯವಲ್ಲದ ಈ ತಿಮಿಂಗಿಲವನ್ನು, ವಿಲೇವಾರಿ ಮಾಡಲು ಸ್ಥಳೀಯ ಗ್ರಾಮ ಪಂಚಾಯತಿಯವರು ಹರಸಾಹಸವನ್ನೇ ಪಡಬೇಕಾಯಿತು. ಜೆಸಿಬಿಯನ್ನು ತಂದು ಕಡಲ ತೀರ ಪ್ರದೇಶದಲ್ಲಿ ಗುಂಡಿ ತೆಗೆದು ಈ ಬೃಹತ್ ಗಾತ್ರದ ತಿಮಿಂಗಿಲ ವನ್ನು ಹೂಳಲಾಯಿತು.

English summary
Large whale Visible in Kutpadi Beach, Udupi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X