ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಾಕ್ ಡೌನ್ ನಡುವೆಯೇ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ!

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಮೇ 10: ದೇಶಾದ್ಯಂತ ಕೊರೊನಾ ವೈರಸ್ ಕಾರಣದಿಂದ ಲಾಕ್‌ಡೌನ್ ಇನ್ನೂ ಅನೇಕ ಕಡೆಗಳಲ್ಲಿ ಚಾಲ್ತಿಯಲ್ಲಿದ್ದು, ಈ ನಡುವೆಯೇ ನಿಷೇಧಿತ ಮಲ್ಪೆಯ ಸೈಂಟ್ ಮೇರಿಸ್ ದ್ವೀಪದಲ್ಲಿ ನಿನ್ನೆ ತಡರಾತ್ರಿ ಪಾರ್ಟಿ ನಡೆದ ವಿಚಾರ ಬೆಳಕಿಗೆ ಬಂದಿದೆ.

ಉಡುಪಿ ಜಿಲ್ಲೆ ಮಲ್ಪೆಯ ಕರಾವಳಿ ಕಾವಲು ಪಡೆಯ ಪೊಲೀಸರು ಕಾರ್ಯಾಚರಣೆ ನಡೆಸಿ, ಪಾರ್ಟಿ ಮಾಡುತ್ತಿದ್ದವರ ಎರಡು ಕಾರುಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಹಾಗೂ ನಿರ್ಮಿತಿ ಕೇಂದ್ರದ ಪ್ರಮುಖರು ಪಾರ್ಟಿಯಲ್ಲಿ ಭಾಗಿಯಾಗಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ.

ಉಡುಪಿ ಗಡಿಯಲ್ಲಿ ಹೆಚ್ಚಿದ ಆತಂಕ; ಬಿಗಿ ಭದ್ರತೆಉಡುಪಿ ಗಡಿಯಲ್ಲಿ ಹೆಚ್ಚಿದ ಆತಂಕ; ಬಿಗಿ ಭದ್ರತೆ

ಈ ಸಂಬಂಧ ನಗರಸಭೆ ವಡಭಾಂಡೇಶ್ವರ ವಾರ್ಡ್ ನ ಸದಸ್ಯ ಯೋಗೀಶ್ ಸಾಲ್ಯಾನ್ ಮಲ್ಪೆಯ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Late Night Party In Malpe St Marys Island

ಸೈಂಟ್ ಮೇರಿಸ್ ದ್ವೀಪದಲ್ಲಿ ಮಾಂಸ, ಮದ್ಯದ ಬಾಟಲಿಗಳು ಪತ್ತೆಯಾಗಿದ್ದು, ದ್ವೀಪದಲ್ಲಿದ್ದ ಎಲ್ಲರನ್ನು ಕರಾವಳಿ ಕಾವಲು ಪಡೆ ಪೊಲೀಸರು ಮುಂಜಾನೆ ವೇಳೆ ತೀರಕ್ಕೆ ಕರೆದುಕೊಂಡು ಬಂದಿದ್ದಾರೆ.

Late Night Party In Malpe St Marys Island

ದ್ವೀಪಕ್ಕೆ ತೆರಳಿದ ಎರಡು ಕಾರುಗಳು ಪ್ರವಾಸಿ ಬೋಟುಗಳ ಜೆಟ್ಟಿಯ ಸಮೀಪ ಪತ್ತೆಯಾಗಿವೆ. ಅದರಲ್ಲಿ ಒಂದು ಕಾರು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಯವರದ್ದಾದರೆ, ಇನ್ನೊಂದು ನಿರ್ಮಿತಿ ಕೇಂದ್ರದವರದ್ದು ಎಂಬುದು ತಿಳಿದುಬಂದಿದೆ. ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

English summary
A late night party in the island of Saint Marys on the prohibited Malpe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X