ಮಧ್ಯಾಹ್ನದವರೆಗೆ ಮಾತ್ರ ಮದ್ಯ ಮಾರಾಟ: ಉಡುಪಿ ಶಾಸಕ

ಉಡುಪಿ, ಮೇ 3: ಕೊರೊನಾ ವೈರಸ್ ಹಾಗೂ ಲಾಕ್ ಡೌನ್ ಹಿನ್ನೆಲೆ ಮಾರ್ಚ್ 24 ರಿಂದ ಮದ್ಯ ಮಾರಾಟವನ್ನು ಬಂದ್ ಮಾಡಲಾಗಿತ್ತು. ನಾಳೆಯಿಂದ ರಾಜ್ಯಾದ್ಯಂತ ಬಾರ್ ಗಳನ್ನು ತೆರೆಯಲು ಸರ್ಕಾರ ಅವಕಾಶ ಕಲ್ಪಿಸಿದೆ.

ಆದರೆ ಉಡುಪಿಯಲ್ಲಿ ಮಧ್ಯಾಹ್ನದ ತನಕ ಮಾತ್ರ ಬಾರ್ ಗಳು ತೆರೆದಿರಲಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಮದ್ಯವನ್ನು ಸಂಜೆಯ ತನಕ ಮಾರಾಟ ಮಾಡುವುದಿಲ್ಲ ಎಂದಿರುವ ಶಾಸಕರು, ವೈನ್ ಶಾಪ್, ಎಂಎಸ್ಐಎಲ್ ಗಳನ್ನು ಮಧ್ಯಾಹ್ನದವರೆಗೆ ಮಾತ್ರ ತೆರೆಯುತ್ತೇವೆ ಎಂದು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಗೆ ವೈನ್ ಶಾಪ್, ಮದ್ಯದಂಗಡಿ ಮುಖ್ಯ ಅಲ್ಲ, ಅದಕ್ಕಿಂತ ಜಿಲ್ಲೆಯ ಜನರ ಆರೋಗ್ಯ ನಮಗೆ ಮುಖ್ಯ ಎಂದು ಹೇಳಿದರು. ಇನ್ನು ಜಿಲ್ಲೆಯಲ್ಲಿ ಬ್ಯೂಟಿ ಪಾರ್ಲರ್ ಮತ್ತು ಸಲೂನ್ ಗಳನ್ನು ಒಂದು ವಾರ ಓಪನ್ ಮಾಡುವುದಿಲ್ಲವೆಂದರು.

Liquor Sales Only Until Noon In Udupi

ಸಲೂನ್ ತೆರೆಯಲು ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ಅವಕಾಶ ಇದೆ. ಹಾಗಿದ್ದರೂ ಜನರ ಆರೋಗ್ಯ ಕಾಪಾಡುವುದು ನಮ್ಮ ಮೊದಲ ಆದ್ಯತೆ ಎಂದು ಹೇಳಿದರು.

ಲಾಕ್ ಡೌನ್ ಮುಗಿಯುವ ತನಕ ಉಡುಪಿ ಜಿಲ್ಲೆಯಲ್ಲಿ ಯಾವುದೇ ಡೆಂಟಲ್ ಕ್ಲಿನಿಕ್ ತೆರೆಯುವುದಿಲ್ಲ. ರಾಜ್ಯ ಸರ್ಕಾರ ಹೇಳಿದರೂ ನಮ್ಮ ಜಿಲ್ಲೆಯಲ್ಲಿ ಮಧ್ಯಾಹ್ನ ಒಂದು ಗಂಟೆಗೆ ಮದ್ಯದಂಗಡಿ ಬಂದ್ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+