ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು: ಹಿಂದಿ-ಇಂಗ್ಲಿಷ್ ಕಲಿಯಲು ಸಿದ್ಧ ಎಂದ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ, ಜೂನ್ 04: 2024ರ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರ ರಾಜಕಾರಣ ರಾಜ್ಯ ರಾಜಕಾರಣದ ಬಿಜೆಪಿ ಲೆಕ್ಕಾಚಾರಗಳಲ್ಲಿ ವ್ಯತ್ಯಾಸ ಆಗಿರಬಹುದು, ಆದರೆ ಪಕ್ಷದ ಶಕ್ತಿ ಕೇಂದ್ರ ಎನಿಸಿರುವ ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿದ ಜಯ ಬಿಜೆಪಿಯ ಪಾಲಾಗಿದೆ.
ತೀವ್ರ ಪೈಪೋಟಿ ಎಂದು ಭಾವಿಸಲಾಗಿದ್ದ ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ, ಕೋಟ ಶ್ರೀನಿವಾಸ ಪೂಜಾರಿ 2,59,175 ಮತಗಳಿಂದ ವಿಜೇತರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಬಲ ಎದುರಾಳಿ ಜಯಪ್ರಕಾಶ್ ಹೆಗ್ಡೆ ಅವರನ್ನು ಹಾಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿಯವರು ಅತಿಹೆಚ್ಚಿನ ಮತಗಳಿಂದ ಸೋಲಿಸಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸುತ್ತಿದ್ದಂತೆ, ಬಿಜೆಪಿ ಕಾರ್ಯಕರ್ತರು ಮತ ಎಣಿಕೆ ಕೇಂದ್ರದ ಆವರಣದಲ್ಲಿ ಕುಣಿದು ಕುಪ್ಪಳಿಸಿ ಜಯಕಾರ ಕೂಗಿದರು. ಶ್ರೀನಿವಾಸ ಪೂಜಾರಿಯವರ ಮನೆಯಲ್ಲೂ ಸಂಭ್ರಮದ ವಾತಾವರಣ ಮನೆ ಮಾಡಿತ್ತು. ಈವೇಳೆ ಮಾತನಾಡಿದ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿ, ನಿರೀಕ್ಷೆಗೂ ಮೀರಿ ನನಗೆ ಮತ ಬಿದ್ದಿದೆ.
ಕಾರ್ಯಕರ್ತರು ಮತ್ತು ನಾಯಕರ ಶ್ರಮ ಇದಕ್ಕೆ ಕಾರಣ. ದೇಶದಲ್ಲಿ ಇಂಡಿಯಾ ಕೂಟದವರು ನೀಡಿದ ಒಂದು ಲಕ್ಷ ರೂಪಾಯಿ ಭರವಸೆಗೆ ಜನ ಮಾರುಹೋಗಿದ್ದಾರೆ. ತಕ್ಕಮಟ್ಟಿಗೆ ಅವರ ತಂತ್ರಗಾರಿಕೆ ಫಲಿಸಿದಂತೆ ಕಾಣುತ್ತದೆ. ಆದರೆ ಎನ್ ಡಿ ಎ ಕೇಂದ್ರದಲ್ಲಿ ಸರ್ಕಾರ ರಚಿಸುತ್ತದೆ. ಮೋದಿ ನೇತೃತ್ವದಲ್ಲಿ ಉತ್ತಮ ಆಡಳಿತ ದೊರಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆರು ತಿಂಗಳಲ್ಲಿ ಹಿಂದಿ ಇಂಗ್ಲಿಷ್ ಕಲಿಯುತ್ತೇನೆ-ಕೋಟ ಶ್ರೀನಿವಾಸ ಪೂಜಾರಿ
ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮುನ್ನೆಲೆಗೆ ಬಂದ ವಿಚಾರವೊಂದು ಕೋಟ ಶ್ರೀನಿವಾಸ ಪೂಜಾರಿ ಅವರ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದೆ. ಶ್ರೀನಿವಾಸ ಪೂಜಾರಿಯವರಿಗೆ ಹಿಂದಿ ಇಂಗ್ಲಿಷ್ ಬರಲ್ಲ ಎಂದು ಎದುರಾಳಿ ಸ್ಪರ್ಧಿ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ ಎಂಬ ವದಂತಿ ಹಬ್ಬಿತ್ತು. ಇದನ್ನು ಬಿಜೆಪಿ ಕಾರ್ಯಕರ್ತರು ಸ್ವಾಭಿಮಾನದ ಪ್ರಶ್ನೆಯಾಗಿ ತೆಗೆದುಕೊಂಡಿದ್ದರು. ಇದೀಗ ಗೆಲುವು ಸಾಧಿಸುತ್ತಿದ್ದಂತೆ ಕೋಟ ಶ್ರೀನಿವಾಸ ಪೂಜಾರಿ ಇಂದಿನಿಂದ ಆರು ತಿಂಗಳಲ್ಲಿ ಹಿಂದಿ ಭಾಷೆಯನ್ನು ಕಲಿತು ಕ್ಷೇತ್ರದ ಜನರ ಸಮಸ್ಯೆಯನ್ನು ದೆಹಲಿಯಲ್ಲಿ ಪ್ರಶ್ನಿಸುವುದಾಗಿ ಭರವಸೆ ನೀಡಿದ್ದಾರೆ
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ












Click it and Unblock the Notifications