ಉಡುಪಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ; ಸ್ಥಳದಲ್ಲಿ ಆತಂಕ
ಉಡುಪಿ, ಜುಲೈ 3: ಉಡುಪಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು, ಆ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಉಡುಪಿಯ ಬಲಾಯಿಪಾದೆ ಎಂಬಲ್ಲಿ ಈ ಘಟನೆ ನಡೆದಿದೆ.
ಘಟನೆಯಲ್ಲಿ ಟ್ಯಾಂಕರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳ- ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗದ ರಸ್ತೆಯನ್ನು ಬಂದ್ ಮಾಡಲಾಗಿದೆ.

ಸದ್ಯ ಗ್ಯಾಸ್ ಸೋರಿಕೆ ಇಲ್ಲವೆಂದು ದೃಢಪಡಿಸಿದ ಅಗ್ನಿಶಾಮಕ ದಳ ಸಿಬ್ಬಂದಿ, ಪಲ್ಟಿಯಾಗಿರುವ ಟ್ಯಾಂಕರ್ ಮೇಲೆತ್ತುವ ತನಕ ಸಾರ್ವಜನಿಕರು ದೂರವಿರಲು ಮನವಿ ಮಾಡಿದ್ದಾರೆ. ಟ್ಯಾಂಕರ್ ಉರುಳಿ ಬಿದ್ದ ಸ್ಥಳದಲ್ಲಿ ಅಂಗಡಿಗಳನ್ನು ಮುಚ್ಚಿಸಿದ್ದಾರೆ. ಸ್ಥಳದಲ್ಲಿ ಮೊಬೈಲ್ ಬಳಸದಂತೆ ಹಾಗು ಸುತ್ತಮುತ್ತ ಬೆಂಕಿ ಹಚ್ಚದಂತೆ ಸೂಚನೆ ನೀಡಿದ್ದಾರೆ.












Click it and Unblock the Notifications