ಕುಟುಂಬದಲ್ಲಿ ಜಗಳ; ಪತ್ನಿ ಮಕ್ಕಳನ್ನು ಬರ್ಬರವಾಗಿ ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಉಡುಪಿ, ನವೆಂಬರ್ 28; ಪತ್ನಿ, ಮಕ್ಕಳನ್ನು ಬರ್ಬರವಾಗಿ ಕೊಂದು ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಗೋಳಿಯಂಗಡಿ ಎಂಬಲ್ಲಿ ನಡೆದಿದೆ.

ಸೂರ್ಯನಾರಾಯಣ ಭಟ್ (50) ಎಂಬುವರೇ ಪತ್ನಿ ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದವರು. ಪತ್ನಿ ಮಾನಸಿ (40) ಮಕ್ಕಳಾದ ಸುಧೀಂದ್ರ (14) ಮತ್ತು ಸುಧೀಶ್ (8) ಎಂಬುವರಿಗೆ ಮೊದಲು ವಿಷ ನೀಡಿ ಬಳಿಕ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಂದಿದ್ದಾನೆ. ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಮೂವರಿಗೂ ರಾಡ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಸೂರ್ಯನಾರಾಯಣ ಬಳಿಕ ತಾನೂ ನೇಣಿಗೆ ಶರಣಾಗಿದ್ದಾನೆ.

Man Murdered Wife And Children Committed Suicide IN Udupi

ಶಂಕರನಾರಾಯಣ ಠಾಣೆಯ ಪೊಲೀಸರು ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಎಸ್ಪಿ ನಿಶಾ ಜೇಮ್ಸ್ ತೆರಳಿ ಪರಿಶೀಲನೆ ನಡೆಸಿ ತನಿಖೆಗೆ ಮಾರ್ಗದರ್ಶನ ನೀಡಿದ್ದಾರೆ. ಗಂಡ ಹೆಂಡತಿ ನಡುವಿನ ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಸೂರ್ಯನಾರಾಯಣ ಭಟ್ ಅಡುಗೆ ಕೆಲಸಕ್ಕೆ ಹೋಗುತ್ತಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+