ಕುಂದಾಪುರದಲ್ಲಿ ಮೀನು ಹಿಡಿಯಲು ಹೋಗಿ ನಾಪತ್ತೆಯಾದ ವ್ಯಕ್ತಿ
ಉಡುಪಿ, ನವೆಂಬರ್ 2: ಮೀನು ಹಿಡಿಯಲೆಂದು ಹೋದ ಕಾರ್ಮಿಕನೊಬ್ಬ ಹೊಳೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ. ಡೇವಿಡ್ ಕರ್ವಾಲೋ (43) ಕುಂದಾಪುರ ಸಮೀಪದ ಕನ್ನಡಕುದ್ರು - ಗುಜ್ಜಾಡಿ ಮಧ್ಯದ ಸೌಪರ್ಣಿಕಾ ನದಿಯಲ್ಲಿ ಮೀನು ಹಿಡಿಯಲು ತೆರಳಿ ನಾಪತ್ತೆಯಾದವರು.
ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದವರಾದ ಡೇವಿಡ್ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, ಬಿಡುವಿನ ವೇಳೆಯಲ್ಲಿ ಮೀನು ಹಿಡಿಯಲು ಹೋಗುತ್ತಿದ್ದರು. ಎಂದಿನಂತೆ ಮೀನು ಹಿಡಿಯಲು ಸೌಪರ್ಣಿಕಾ ನದಿಗೆ ತೆರಳಿದ್ದರು. ಬೆಳಿಗ್ಗೆ ಸುಮಾರು 9 ಗಂಟೆಗೆ ಹೋದವರು ನಾಪತ್ತೆಯಾಗಿದ್ದು, ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರಬಹುದಾದ ಶಂಕೆ ವ್ಯಕ್ತವಾಗಿದೆ.

ಅನುಮಾನಗೊಂಡ ಮನೆಯವರು ಹುಡುಕಿದರೂ ಪ್ರಯೋಜನವಾಗಲಿಲ್ಲ. ಬಳಿಕ ಗಂಗೊಳ್ಳಿ ಪೊಲೀಸರಿಗೆ ದೂರು ನೀಡಿದ್ದು, ಈಗ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹೊಳೆಯಲ್ಲಿ ಶೋಧ ನಡೆಸುತ್ತಿದ್ದಾರೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications