ಮಂಗಳೂರು; ರೈಲಿನಲ್ಲೇ ಅತ್ಯಾಚಾರಕ್ಕೆ ಯತ್ನಿಸಿದವನಿಗೆ ಬಿತ್ತು ಗೂಸ

ಮಂಗಳೂರು, ಅಕ್ಟೋಬರ್ 23: ರೈಲಿನಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ.

ಸುಬ್ರಹ್ಮಣ್ಯ ಸಮೀಪ ಈ ಕೃತ್ಯ ನಡೆದಿದೆ. ಬೆಂಗಳೂರಿನ ಕೆಂಗೇರಿ ನಿವಾಸಿ ಮಂಜು (27) ಬಂಧಿತ ಆರೋಪಿ. ರೈಲು ನೆಟ್ಟಣದಿಂದ ಮಂಗಳೂರಿಗೆ ಹೋಗುತ್ತಿದ್ದಾಗ ಈ ವ್ಯಕ್ತಿ ಅತ್ಯಾಚಾರಕ್ಕೆ ಮುಂದಾಗಿದ್ದಾನೆ.

Man Who Tried To Rape In A Train Beaten By People In Mangaluru

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಆರೋಪಿ ಮಹಿಳಾ ಬೋಗಿಗೆ ಹತ್ತಿ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಚೈನ್ ಎಳೆದು ರೈಲನ್ನು ನಿಲ್ಲಿಸಿದ್ದಾರೆ. ಇದು ಸಹ ಪ್ರಯಾಣಿಕರಿಗೆ ಗೊತ್ತಾದಾಗ ಆರೋಪಿಯು ರೈಲಿನಿಂದ ಹಾರಿ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಕೋಡಿಂಬಾಳ ಎಂಬಲ್ಲಿ ಸಾರ್ವಜನಿಕರು ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾದರು. ಸಾರ್ವಜನಿಕರು ಕಡಬ ಪೊಲೀಸರಿಗೆ ಆರೋಪಿಯನ್ನು ಹಸ್ತಾಂತರ ಮಾಡಿದರು. ಇದು ರೈಲಿನಲ್ಲಿ ನಡೆದ ಅಪರಾಧವಾದ ಕಾರಣ ಕಡಬ ಪೊಲೀಸರು ಆರೋಪಿಯನ್ನು ರೈಲ್ವೇ ಪೊಲೀಸರಿಗೆ ಹಸ್ತಾಂತರ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+