ಅದಾನಿ ಏರ್‌ಪೋರ್ಟ್‌ ಹೆಸರು ಬದಲಾವಣೆ ಸಿಎಂಗೆ ಮನವಿ

ಉಡುಪಿ, ಡಿಸೆಂಬರ್ 10: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇತಿಹಾಸದ ವೀರ ಪುರುಷರಾದ ಕೋಟಿ-ಚೆನ್ನಯ್ಯರ ಹೆಸರು ನಾಮಕರಣ ಮಾಡಬೇಕೆಂದು ಹೋರಾಟ ನಡೆಯುತ್ತಿದೆ. ನವೆಂಬರ್ 1ರಿಂದ ಅದಾನಿ ಗ್ರೂಪ್‌ ವಿಮಾನ ನಿಲ್ದಾಣದ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದೆ.

ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಅವಿಭಜಿತ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಯ ಶಾಸಕರ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿ ಮಾಡಿತು.

ಕೇಂದ್ರ ಸರ್ಕಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಗ್ರೂಪ್‌ಗೆ ನೀಡಿದ್ದು, 'ಅದಾನಿ ವಿಮಾನ ನಿಲ್ದಾಣ' ಎಂದು ನಾಮಕರಣ ಮಾಡಲಾಗಿದೆ. ವಿಮಾನ ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಬೇಕು ಎಂದು ಮನವಿ ಮಾಡಿತು.

Mangaluru Airport Rename BJP Delegation Meets Yediyurappa

ಶಾಸಕರ ನಿಯೋಗದಲ್ಲಿ ಕಾರ್ಕಳ ಶಾಸಕ ಸುನೀಲ್ ಕುಮಾರ್, ಬಂಟ್ವಾಳದ ರಾಜೇಶ್ ನಾಯ್ಕ್, ಉಡುಪಿಯ ರಘುಪತಿ ಭಟ್, ಮೂಡುಬಿದಿದೆಯ ಉಮಾನಾಥ್ ಕೋಟ್ಯಾನ್, ಪುತ್ತೂರಿನ ಸಂಜೀವ ಮಠಂದೂರ್, ಮಂಗಳೂರು ಉತ್ತರದ ಭರತ್ ಶೆಟ್ಟಿ, ಮಂಗಳೂರು ದಕ್ಷಿಣದ ವೇದವ್ಯಾಸ ಕಾಮತ್, ಬೆಳ್ತಂಗಡಿಯ ಹರೀಶ್ ಪೂಂಜಾ ಇದ್ದರು.

ಕೇಂದ್ರ ಸರ್ಕಾರ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಗ್ರೂಪ್‌ಗೆ ನೀಡಿದೆ. ನವೆಂಬರ್ 1ರಿಂದ ಅದಾನಿ ಗ್ರೂಪ್ ಮಂಗಳೂರು ವಿಮಾನ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳುತ್ತಿದೆ. ವಿಮಾನ ನಿಲ್ದಾಣದ ಹೆಸರನ್ನು 'ಅದಾನಿ ಮಂಗಳೂರು ಇಂಟರ್ ನ್ಯಾಷನಲ್ ಏರ್ ಪೋರ್ಟ್' ಎಂದು ಬದಲಾವಣೆ ಮಾಡಲಾಗಿದೆ. 50 ವರ್ಷಗಳ ಕಾಲ ನಿರ್ವಹಣೆಯನ್ನು ಸಂಸ್ಥೆ ನೋಡಿಕೊಳ್ಳಲಿದೆ.

Mangaluru Airport Rename BJP Delegation Meets Yediyurappa

ವಿಮಾನ ನಿಲ್ದಾಣದ ಹೆಸರು ಬದಲಾವಣೆ ಮಾಡಿರುವುದು, ನಿರ್ವಹಣೆಯನ್ನು ವಹಿಸಿರುವುದರ ವಿರುದ್ಧ ದಕ್ಷಿಣ ಕನ್ನಡದಲ್ಲಿ ಅಸಮಾಧಾನ ಉಂಟಾಗಿದೆ. ವಿಮಾನ ನಿಲ್ದಾಣದ ಹೆಸರನ್ನು ಕೋಟಿ-ಚೆನ್ನಯ್ಯ ಎಂದು ಬದಲಾಯಿಸಬೇಕು ಎಂಬ ಒತ್ತಾಯ ಪಡಿಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+