ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಸಾಯಿಖಾನೆಗೆ 15 ಕೋಟಿ ರೂ.ನೀಡಿದ ಖಾದರ್: ಸ್ಪಷ್ಟನೆ ಕೇಳಿದ ಕಾರ್ಕಳ ಶಾಸಕ ಸುನಿಲ್ ಕುಮಾರ್

|
Google Oneindia Kannada News

ಉಡುಪಿ, ಅಕ್ಟೋಬರ್. 08: ಮಂಗಳೂರಿನ ಸ್ಮಾರ್ಟ್ ಸಿಟಿಯ ಅನುದಾನ ಅಭಿವೃದ್ಧಿಗೆ ಬಳಸಬೇಕಾಗಿತ್ತು. ಆದರೆ ಕಸಾಯಿಖಾನೆ ನಿರ್ಮಾಣಕ್ಕೆ ಹಣ ಬಳಸಿರುವ ಹಿಂದೆ ದೊಡ್ಡ ಹುನ್ನಾರ ಇದೆ. ಈ ಬಗ್ಗೆ ಸಚಿವ ಯು.ಟಿ ಖಾದರ್ ಸ್ಪಷ್ಟನೆ ಕೊಡಬೇಕು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಕಾರ್ಕಳದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸುನೀಲ್ ಕುಮಾರ್, 15 ಕೋಟಿ ರೂಪಾಯಿ ಹಣವನ್ನು ಕಸಾಯಿಖಾನೆಗೆ ಬಳಕೆ ಮಾಡಲು ಬಿಡುವುದಿಲ್ಲ. ಇದು ಮಹಾನಗರ ಪಾಲಿಕೆಗೆ ಸಂಬಂಧಪಟ್ಟ ವಿಷಯವಲ್ಲ. ಇದರ ವಿರುದ್ಧ ಮೂರು ಜಿಲ್ಲೆಗಳಲ್ಲಿ ದೊಡ್ಡ ಹೋರಾಟ ಮಾಡುತ್ತೇವೆ.

'15 ಕೋಟಿ ರೂ.ವೆಚ್ಚದಲ್ಲಿ ಕಸಾಯಿಖಾನೆ ರಚಿಸಲು ಮುಂದಾಗಿರುವುದು ದುರಂತ''15 ಕೋಟಿ ರೂ.ವೆಚ್ಚದಲ್ಲಿ ಕಸಾಯಿಖಾನೆ ರಚಿಸಲು ಮುಂದಾಗಿರುವುದು ದುರಂತ'

ಖಾದರ್ ತಮ್ಮ ನಿಲುವನ್ನು ಸ್ಪಷ್ಟ ಮಾಡಬೇಕು. ಹಿಂದೂ ವಿರೋಧಿ ನೀತಿಯನ್ನು ತಕ್ಷಣ ಕೈಬಿಡಬೇಕು. ಖಾದರ್ ಮತ್ತು ಅವರ ಬೆಂಬಲಿಗರು ಅಪರಾಧಿ ಚಟುವಟಿಕೆಗೆ ಬೆಂಬಲಿಸುತ್ತಿದ್ದಾರೆ. ಸರ್ಕಾರಿ ಹಣ ಅಭಿವೃದ್ಧಿಗೆ ಉಪಯೋಗವಾಗಲಿ. ಆದರೆ ಖಾದರ್ ಕಸಾಯಿಖಾನೆ ಬಗ್ಗೆ ಜಾಸ್ತಿ ಆಸಕ್ತಿ ಹೊಂದಿದ್ದಾರೆ ಎಂದು ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

Mangaluru smart city project has lost its way

ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ವ್ಯಂಗ್ಯವಾಡಿದ ರಮಾನಾಥ್ ರೈಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ವ್ಯಂಗ್ಯವಾಡಿದ ರಮಾನಾಥ್ ರೈ

ಸ್ಮಾರ್ಟ್ ಸಿಟಿ ಯೋಜನೆ ಬಗ್ಗೆ ಖಾದರ್ ಗೆ ಆಸಕ್ತಿಯಿಲ್ಲ. ರಾಜ್ಯದ ಜನ ಸುಂದರ ನಗರವನ್ನು ಬಯಸುತ್ತಾರೆ. ಅಕ್ರಮ ಕಸಾಯಿಖಾನೆ ಮುಚ್ಚಲು ಸರ್ಕಾರಕ್ಕೆ ತಾಕತ್ತಿಲ್ಲ. ಅಕ್ರಮ ಗೋವು ಸಾಗಾಟ ತಡೆಯುವ ತಾಕತ್ತು ರಾಜ್ಯ ಸರ್ಕಾರಕ್ಕಿಲ್ಲ ಎಂದು ಶಾಸಕರು ಕಿಡಿಕಾರಿದರು.

English summary
MLA Sunil Kumar said that Mangaluru smart city project has lost its way and forgotten its goal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X