ಮತ್ಸಗಂಧ ಎಕ್ಸ್‌ಪ್ರೆಸ್ ರೈಲು: ಕರಾವಳಿ ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ
ಉಡುಪಿ, ಫೆಬ್ರವರಿ 05: ಕರ್ನಾಟಕ ಕರಾವಳಿಯ ಪ್ರಸಿದ್ಧ ರೈಲು 'ಮತ್ಸಗಂಧ ಎಕ್ಸ್‌ಪ್ರೆಸ್'. ಕರಾವಳಿ ಮತ್ತು ಮುಂಬೈಯನ್ನು ಈ ರೈಲು ಸಂಪರ್ಕಿಸುತ್ತದೆ. ಈ ರೈಲು ಪ್ರಯಾಣಿಕರಿಗೆ ಈಗ ಸಿಹಿಸುದ್ದಿಯೊಂದು ಸಿಕ್ಕಿದೆ. ಪ್ರಯಾಣಿಕರ ಹಲವು ವರ್ಷಗಳ ಬೇಡಿಕೆಗೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ಬೇಡಿಕೆ ಈಡೇರಿಸಿದ ಕೇಂದ್ರ ಸರ್ಕಾರಕ್ಕೆ ಉಡುಪಿ-ಚಿಕ್ಕಮಗಳೂರು ಸಂಸದರು ಧನ್ಯವಾದ ಅರ್ಪಿಸಿದ್ದಾರೆ.
ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ 'ಮತ್ಸಗಂಧ ಎಕ್ಸ್‌ಪ್ರೆಸ್ ರೈಲು' ಕುರಿತು ಪ್ರಮುಖವಾದ ಮಾಹಿತಿಯೊಂದನ್ನು ನೀಡಿದ್ದಾರೆ. ಕರಾವಳಿ ಜನರಿಗೆ ಇದು ಹೇಗೆ ಉಪಯೋಗ ಆಗಲಿದೆ? ಎಂದು ಮಾಹಿತಿಯನ್ನು ನೀಡಿದ್ದಾರೆ.

ಸಂಸದರ ಪೋಸ್ಟ್: ಕೋಟ ಶ್ರೀನಿವಾಸ ಪೂಜಾರಿ, 'ಕರಾವಳಿ ಕರ್ನಾಟಕ ಹಾಗೂ ಮುಂಬೈ ನಡುವಿನ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲು ಈ ಭಾಗದ ರೈಲ್ವೆ ಪ್ರಯಾಣಿಕರಲ್ಲಿ ಭಾವನಾತ್ಮಕ ಸಂಬಂಧವನ್ನು ಹೊಂದಿವೆ. ಅತಿಹೆಚ್ಚು ಪ್ರಯಾಣಿಕರನ್ನು ಒಯ್ಯುವ ಈ ರೈಲು ಭಾಗಶಃ ಶಿಥಿಲಾವಸ್ಥೆಗೆ ಬಂದಿದ್ದು ಅನೇಕ ಪ್ರಯಾಣಿಕರು ಈ ಬಗ್ಗೆ ನನ್ನಲ್ಲಿ ಮನವಿ ಮಾಡಿದ್ದರು' ಎಂದು ಹೇಳಿದ್ದಾರೆ.
'ಅನೇಕರು ವಿಡಿಯೋ ಮೂಲಕ ವ್ಯವಸ್ಥೆಯನ್ನು ಸರಿಪಡಿಸುವ ಸಲಹೆ ನೀಡಿದ್ದರು. ಈ ಎಲ್ಲಾ ಸಲಹೆ ಹಾಗೂ ಮನವಿಯನ್ನು ಪುರಸ್ಕರಿಸಿ ನಾನು ಗೌರವಾನ್ವಿತ ಕೇಂದ್ರ ರೈಲ್ವೆ ಇಲಾಖೆಯ ಸಚಿವರುಗಳಾದ ಶ್ರೀ ಅಶ್ವಿನಿ ವೈಷ್ಣವ್ ಹಾಗೂ ಶ್ರೀ ವಿ.ಸೋಮಣ್ಣ ರವರ ಗಮನಕ್ಕೆ ತಂದಿದ್ದು, ಸಂಪೂರ್ಣ ವರದಿಯನ್ನು ಅವರ ಮುಂದಿಟ್ಟಿದ್ದೆ' ಎಂದು ತಿಳಿಸಿದ್ದಾರೆ.
'ನನ್ನ ಮನವಿಯನ್ನು ತಕ್ಷಣ ಪುರಸ್ಕರಿಸಿದ ಗೌರವಾನ್ವಿತ ಸಚಿವರುಗಳು ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನ ಸಂಪೂರ್ಣ ಕೋಚ್‌ಗಳನ್ನು ಬದಲಾಯಿಸಿ ಅತ್ಯಾಧುನಿಕ ಜರ್ಮನ್ ತಂತ್ರಜ್ಞಾನದ ಎಲ್‌ಹೆಚ್‌ಬಿ ಕೋಚ್ ಅಳವಡಿಸಲು ಅಧಿಕಾರಿಗಳಿಗೆ ಆದೇಶ ನೀಡಿದ್ದರು. ಇದೀಗ ನೂತನ ಕೋಚ್‌ಗಳು ಸಿದ್ಧವಾಗಿದ್ದು ಇದೇ ಬರುವ ಫೆಬ್ರವರಿ 17ರಂದು ಮೊದಲ ಪ್ರಯಾಣವನ್ನು ಬೆಳೆಸಲಿದೆ' ಎಂದು ಮಾಹಿತಿ ನೀಡಿದ್ದಾರೆ.
'ಸ್ವಾತಂತ್ರ್ಯದ ಸುವರ್ಣ ಮಹೋತ್ಸವದ ಶುಭ ಘಳಿಗೆಯಲ್ಲಿ ಅಂದಿನ ಕೇಂದ್ರ ಸಚಿವರಾದ ಸ್ಮರಣೀಯ ದಿ. ಜಾರ್ಜ್ ಫರ್ನಾಂಡೀಸ್ ಅವರ ವಿಶೇಷ ಪರಿಶ್ರಮದಿಂದ ಅಂದಿನ ಜನಮೆಚ್ಚಿದ ಪ್ರಧಾನಮಂತ್ರಿ ಸ್ಮರಣೀಯ ದಿ.ಅಟಲ್ ಬಿಹಾರಿ ವಾಜಪೇಯಿ ರವರ ಕಾಳಜಿಯ ಮೇರೆಗೆ ಮೇ 01-1998ರ ಸಂದರ್ಭದಲ್ಲಿ ಈ ರೈಲು ಉದ್ಘಾಟನೆಗೊಂಡಿತು. ಅಲ್ಲಿಂದ ಇಂದಿನವರೆಗೂ ಸುಧೀರ್ಘ ಕಾಲ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕರಾವಳಿ ಜನರನ್ನು ಭಾವನಾತ್ಮಕವಾಗಿ ಈ ರೈಲು ಬೆಸೆದಿದೆ. ಈಗ ಆಧುನಿಕ ಭಾರತದ ದ್ಯೋತಕವಾಗಿ ಈ ರೈಲು ಹೊಸ ತಂತ್ರಜ್ಞಾನದ ಮೂಲಕ ಕಂಗೊಳಿಸಲಿದ್ದು ಪ್ರಯಾಣಿಕರಿಗೆ ವಿಶೇಷ ಸೇವೆಯನ್ನು ನೀಡಲಿದೆ' ಎಂದು ಸಂಸದರು ವಿವರಣೆ ನೀಡಿದ್ದಾರೆ.
'ಆಧುನಿಕ ತಂತ್ರಜ್ಞಾನದ ಕೋಚ್‌ಗಳನ್ನು ಹೊಂದಿರುವ ಈ ರೈಲು ಅಪಘಾತವಾದರೂ ಜನರು ಸುರಕ್ಷಿತವಾಗಿರುತ್ತಾರೆ. ಯಾವುದೇ ಅಪಘಾತ ಸಂಭವಿಸಿದರೂ ಕೋಚ್‌ಗಳು ಪಲ್ಟಿ ಆಗದೆ ZIGZAG ರೀತಿಯಲ್ಲಿ ವರ್ಗೀಕರಿಸಿ ನಿಂತುಬಿಡುತ್ತದೆ. ಈ ಹೊಸ ಕೋಚ್‌ನ ರೈಲಲ್ಲಿ ಶಬ್ದದ ಸಮಸ್ಯೆ ಕಡಿಮೆಯಾಗುತ್ತದೆ. ರೈಲು ಓಡಾಟದ ಸಂದರ್ಭದಲ್ಲಿ ಹಿಂದಿಗಿಂತ ಶಬ್ದವನ್ನು ಕಡಿಮೆಗೊಳಿಸುತ್ತದೆ. ಶೌಚಾಲಯ ವ್ಯವಸ್ಥೆಯೂ ಸಂಪೂರ್ಣವಾಗಿ ಬದಲಾಗಿದ್ದು ಆಧುನಿಕ ಶೈಲಿಯನ್ನು ಅಳವಡಿಸಲಾಗಿದೆ' ಎಂದು ಸಂಸದರು ಹೇಳಿದ್ದಾರೆ.
'ಫೆಬ್ರವರಿ 17ರಂದು ಈ ಹೊಸ ಕೋಚ್‌ಗಳುಳ್ಳ ರೈಲಿನ ಪ್ರಥಮ ಪ್ರಯಾಣ ನಡೆಸಲಿದ್ದು ಉಡುಪಿಗೆ ಆಗಮಿಸುವ ಸಂದರ್ಭದಲ್ಲಿ ತಮ್ಮೆಲ್ಲರನ್ನು ನಾನು ಆತ್ಮೀಯವಾಗಿ ಆಮಂತ್ರಿಸುತ್ತಿದ್ದೇನೆ. ಈ ರೈಲನ್ನು ಸ್ವಾಗತಿಸುವ ಸಂದರ್ಭದಲ್ಲಿ ಮುಂದಿನ ರೈಲ್ವೆ ಯೋಜನೆಗಳ ಕುರಿತು ಒಂದಷ್ಟು ಚರ್ಚೆಗಳು ನಡೆಯಲಿದ್ದು ಅಂದು ರೈಲ್ವೆ ಅಧಿಕಾರಿಗಳು ನಮ್ಮ ಜೊತೆಗೆ ಇರಲು ತಿಳಿಸಿದ್ದೇನೆ. ರೈಲ್ವೆ ಪ್ರಯಾಣಿಕರು ಯಾವುದೇ ಕುಂದು ಕೊರತೆಗಳನ್ನು ರೈಲು ಪ್ರಯಾಣಿಸುವ ಮೂಲಕ ಚರ್ಚಿಸಲಿದ್ದೇನೆ' ಎಂದು ಸಂಸದರು ಭರವಸೆ ನೀಡಿದ್ದಾರೆ.
'ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನ ಬೆನ್ನಲ್ಲೇ ಮಹಾರಾಷ್ಟ್ರಕ್ಕೆ ತೆರಳುವ ಮಂಗಳೂರು ಎಕ್ಸ್‌ಪ್ರೆಸ್ ರೈಲು ಮಾರ್ಚ್1 ರಿಂದ ನೂತನ ಎಲ್‌ಹೆಚ್‌ಬಿ ಕೋಚ್‌ಗಳನ್ನೊಳಗೊಂಡು ಪ್ರಯಾಣ ಬೆಳೆಸಲಿದೆ. ಈ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ವೇಗ ಕೊಟ್ಟು ಸಹಕರಿಸಿದ ದೇಶದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ರವರಿಗೆ ಹಾಗೂ ವಿಶೇಷವಾಗಿ ನನ್ನೆಲ್ಲಾ ರೈಲ್ವೆ ಮನವಿಗಳಿಗೆ ಬೆಂಬಲ ನೀಡಿ ಸಹಕರಿಸುವ ಗೌರವಾನ್ವಿತ ಸಚಿವರಾದ ಶ್ರೀ ವಿ.ಸೋಮಣ್ಣರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಇದರ ಜೊತೆಗೆ ಕಾಲಕಾಲಕ್ಕೆ ರೈಲ್ವೆ ಅಭಿವೃದ್ಧಿ ಯೋಜನೆಗಳ ಕುರಿತಾಗಿ ಅಮೂಲ್ಯ ಸಲಹೆಗಳನ್ನು ನೀಡುತ್ತಿರುವ ರೈಲ್ವೆ ಬಳಕೆದಾರರ ಸಮಿತಿಯ ಪ್ರಮುಖರಿಗೂ ವಿಶೇಷ ಧನ್ಯವಾದಗಳನ್ನು ಸಮರ್ಪಿಸುತ್ತೇನೆ' ಎಂದು ಪೋಸ್ಟ್‌ನಲ್ಲಿ ಸಂಸದರು ತಿಳಿಸಿದ್ದಾರೆ.
-
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಹಿರಿಯ ನಾಗರಿಕರಿಗೆ ರೈಲ್ವೇ ನಿಯಮಗಳು 2026: ರಿಯಾಯಿತಿ ಇಲ್ಲದಿದ್ದರೂ ಸೌಲಭ್ಯಗಳು ಮುಂದುವರಿಕೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications