ಕೊನೆಗೂ ಉಡುಪಿಯತ್ತ ಲಕ್ಷ್ಮೀ ಹೆಬ್ಬಾಳ್ಕರ್: ಅಧಿಕಾರಿಗಳೊಂದಿಗೆ ಮಹತ್ವ ಸಭೆ
ಉಡುಪಿ, ಜೂನ್ 13: ಕಳೆದ ಮಾರ್ಚ್ ತಿಂಗಳಿನಲ್ಲಿ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿನ್ನೆ ಉಡುಪಿ ಜಿಲ್ಲೆಗೆ ಆಗಮಿಸಿದ್ದಾರೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲಾಗಲೀ, ವಿಧಾನಪರಿಷತ್‌ನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಸಮಯದಲ್ಲಾಗಲೀ ಪಕ್ಷದ ಪ್ರಚಾರಕ್ಕೆ ಆಗಮಿಸದ ಸಚಿವೆಯ ನಡೆ ಸ್ವಪಕ್ಷೀಯರಿಂದಲೇ ತೀವ್ರ ಟೀಕೆಗೆ ಗುರಿಯಾಗಿತ್ತು.
ಕೊನೆಗೂ ಜಿಲ್ಲೆಗೆ ಆಗಮಿಸಿದ ಉಸ್ತುವಾರಿ ಸಚಿವೆ ಉಡುಪಿಯ ರಜತಾದ್ರಿ ಯಲ್ಲಿರುವ ಡಾ. ವಿಎಸ್ ಆಚಾರ್ಯ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಕೆಲವು ಅಧಿಕಾರಿಗಳನ್ನು ಸಚಿವೆ ತರಾಟೆಗೆ ತೆಗೆದುಕೊಂಡರು. ಇನ್ನು ರಾಜ್ಯ ಸರ್ಕಾರ ಜನಪರವಾಗಿರುವ ಹಲವಾರು ಯೋಜನೆಗಳನ್ನ ತಂದಿದೆ.

ಈ ಜನಪದ ಯೋಜನೆಗಳನ್ನ ಜನರ ಬಳಿಗೆ ಮುಟ್ಟಿಸುವ ಕೆಲಸ ಅಧಿಕಾರಿಗಳದ್ದು ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ ಯೋಜನೆಗಳನ್ನ ಜನರ ಬಳಿ ತಲುಪಿಸಿದರೆ ರಾಜ್ಯ ಸರ್ಕಾರ ಯೋಜನೆ ಮಾಡಿರುವುದು ಸಾರ್ಥಕವಾಗುತ್ತದೆ ಈ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಮುಖ್ಯವಾಗಿ ಮಳೆಗಾಲದ ಸಿದ್ಧತೆ, ರಸ್ತೆಗಳ ಸ್ಥಿತಿಗತಿ, ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳು ಸಭೆಯಲ್ಲಿ ಪ್ರಸ್ತಾಪಗೊಂಡವು.ಅದ್ಯತೆ ಮೇರೆಗೆ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳುವಂತೆ. ಜನರ ಸಮಸ್ಯೆಗೆ ತಕ್ಷಣ ಪರಿಹಾರ ಒದಗಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯ ಬಳಿಕ ಮಾಧ್ಯಮದವರಿಗೆ ಮಾತನಾಡಿದ ಸಚಿವೆ, ಗೋ ಬ್ಯಾಕ್ ಅಭಿಯಾನದ ಬಗ್ಗೆ ನನಗೆ ತಿಳಿದಿಲ್ಲ. ನನ್ನ ಪಕ್ಷದ ಕಾರ್ಯಕರ್ತರು ನಾಯಕರು ನನ್ನ ಜೊತೆಗೆ ಒಳ್ಳೆಯ ರೀತಿಯಲ್ಲಿ ಇದ್ದಾರೆ. ಸಮಯ ಸಿಕ್ಕಾಗ ನನ್ನ ಜವಾಬ್ದಾರಿಯನ್ನ ಮಾಡಿದ್ದೇನೆ. ನನ್ನ ಮಗ ಬೆಳಗಾವಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಜವಾಬ್ದಾರಿ ಇತ್ತು. ಜಿಲ್ಲೆಯ ಉಸ್ತುವಾರಿ ಕೆ.ಜೆ ಜಾರ್ಜ್ ಅವರಿಗೆ ನೀಡಿರುವ ಹಿನ್ನೆಲೆಯಲ್ಲಿ ನಾನು ಬೆಳಗಾವಿಯಲ್ಲಿದ್ದೆ ಎಂದರು.
ರೇಣುಕಾ ಸ್ವಾಮಿ ಕೊಲೆ ವಿಚಾರವಾಗಿ ಮಾತನಾಡಿದ ಸಚಿವೆ, ಕಾನೂನು ಚೌಕಟ್ಟಿನಲ್ಲಿ ಎಲ್ಲರೂ ಒಂದೇ ಎಲ್ಲರನ್ನ ಸಮಾನ ದೃಷ್ಟಿಯಲ್ಲಿ ತನಿಖೆ ನಡೆಸಲಾಗುತ್ತದೆ ಎಂದರು. ಇನ್ನು ತಪ್ಪಿತಸ್ಥರಿಗೆ ಖಂಡಿತವಾಗಿ ಶಿಕ್ಷೆಯಾಗುತ್ತದೆ ರೇಣುಕಾಸ್ವಾಮಿ ಕುಟುಂಬದ ಪರವಾಗಿ ಸರಕಾರ ನಿಲ್ಲುತ್ತದೆ. ನಮ್ಮ ಸರಕಾರ ಖಂಡಿತವಾಗಿ ಆರ್ಥಿಕವಾಗಿ ರೇಣುಕು ಸ್ವಾಮಿ ಕುಟುಂಬ ಜೊತೆ ನಿಲ್ಲುತ್ತದೆ ಎಂದರು.












Click it and Unblock the Notifications