ಅನಂತ್ ಕುಮಾರ್ ಭೇಟಿ, ಸಚಿವ ಪ್ರಮೋದ್ ಮಧ್ವರಾಜ್ ಸ್ಪಷ್ಟನೆ

ಉಡುಪಿ, ಅಕ್ಟೋಬರ್ 17 : 'ನಾನು ಬಿಜೆಪಿ ಸೇರುತ್ತೇನೆ ಎಂಬ ವದಂತಿ ಸುಳ್ಳು. ಪಕ್ಷಾಂತರ ಮಾಡುತ್ತಿಲ್ಲ, ಉಡುಪಿಯ ಐಬಿಗೆ ಅನಂತ್ ಕುಮಾರ್ ಭೇಟಿ ಮಾಡಲು ಹೋಗಿರಲಿಲ್ಲ. ಅಲ್ಲಿಗೆ ಹೋದಾಗ ಅನಂತ್ ಕುಮಾರ್ ಅವರನ್ನು ಭೇಟಿ ಮಾಡಿದೆ' ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಸ್ಪಷ್ಟನೆ ನೀಡಿದರು.

ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಸೋಮವಾರ ಉಡುಪಿಯಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರನ್ನು ಭೇಟಿ ಮಾಡಿರುವ ಫೋಟೋ ವೈರಲ್ ಆಗಿದೆ. ಸಚಿವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಆದ್ದರಿಂದ, ಇಂದು ಅವರು ಸ್ಪಷ್ಟನೆ ನೀಡಿದ್ದಾರೆ.

Minister Pramod Madhwaraj clarification on meeting with BJP leaders

ಉಡುಪಿಯಲ್ಲಿ ಮಂಗಳವಾರ ಮಾತನಾಡಿದ ಸಚಿವರು, 'ನಾನು ಪಕ್ಷಾಂತರ ಮಾಡುತ್ತಿಲ್ಲ. ಉಡುಪಿಯ ಐಬಿಗೆ ಹೋದಾಗ ಅವರು ಅಲ್ಲಿದ್ದರು. ಕೇಂದ್ರ ಸಚಿವರನ್ನು ಸೌಜನ್ಯದಿಂದ ಮಾತನಾಡಿಸಿ ಬರುವುದು ನಮ್ಮ ಕರ್ತವ್ಯ. ನಾವಿಬ್ಬರೇ ಕೂತು ಮಾತನಾಡಿಲ್ಲ. ಅಲ್ಲಿ ಹಲವು ಜನರಿದ್ದರು. ಇಷ್ಟಕ್ಕೆ ಬೇರೆ ಅರ್ಥ ಕಲ್ಪಿಸುವುದು ಸರಿಯಲ್ಲ' ಎಂದು ಹೇಳಿದರು.

ಸೋಮವಾರ ಉಡುಪಿಯಲ್ಲಿ ಬಿಜೆಪಿಯ ಪರಿವರ್ತನಾ ಸಮಾವೇಶ ಆಯೋಜನೆ ಮಾಡಲಾಗಿತ್ತು. ಈ ಸಮಾವೇಶದಲ್ಲಿ ಪಾಲ್ಗೊಳ್ಳಲು ಅನಂತ್ ಕುಮಾರ್ ಸೇರಿದಂತೆ ವಿವಿಧ ಬಿಜೆಪಿ ನಾಯಕರು ಉಡುಪಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿ ನಾಯಕರ ಜೊತೆ ಕುಳಿತು ಮಾತನಾಡಿದ್ದರು. ಈ ಪೋಟೋ ವೈರಲ್ ಆಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+