• search
 • Live TV
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜ್ಯದಲ್ಲಿ ಮರಣ ದರ ಹೆಚ್ಚಿಲ್ಲ, ಉಡುಪಿಯಲ್ಲಿ ಸುಧಾಕರ್ ಹೇಳಿಕೆ

|

ಮಣಿಪಾಲ, ಮಾರ್ಚ್ 30: ಸಚಿವ ಡಾ.ಕೆ.ಸುಧಾಕರ್, ಉಡುಪಿಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಮಾತನಾಡಿ, ಮಣಿಪಾಲ್ ಕ್ಯಾಂಪಸ್ ದೊಡ್ಡದಿದ್ದು, ಸುಮಾರು 11 ಸಾವಿರ ಜನರಿದ್ದಾರೆ. ಇಲ್ಲಿ 900 ಮಂದಿಗೆ ಸೋಂಕಿತರಾಗಿದ್ದು, ನಿರ್ದಿಷ್ಟ ಕ್ರಮ ವಹಿಸಲು ಸೂಚಿಸಲಾಗಿದೆ. ಇಡೀ ಕ್ಯಾಂಪಸ್ ಅನ್ನು ಕಂಟೇನ್ಮೆಂಟ್ ಮಾಡಲಾಗಿದೆ. ಯಾರಿಗೂ ಸೋಂಕಿನ ತೀವ್ರತೆ ಇಲ್ಲ ಎಂಬುದು ಸಮಾಧಾನಕರ ಸಂಗತಿ. ನೆಗೆಟಿವ್ ಇರುವವರನ್ನು ಮಾತ್ರ ಮನೆಗೆ ಕಳುಹಿಸಲಾಗುತ್ತಿದೆ ಎಂದರು.

ಉಡುಪಿ: ಮಣಿಪಾಲ ವಿಶ್ವವಿದ್ಯಾಲಯದ 5,800 ವಿದ್ಯಾರ್ಥಿಗಳು ಕ್ವಾರಂಟೈನ್ಉಡುಪಿ: ಮಣಿಪಾಲ ವಿಶ್ವವಿದ್ಯಾಲಯದ 5,800 ವಿದ್ಯಾರ್ಥಿಗಳು ಕ್ವಾರಂಟೈನ್

ಒಂದೇ ಕ್ಯಾಂಪಸ್ ನಲ್ಲಿ ಹೆಚ್ಚು ಜನರಿರುವುದು ಸೋಂಕು ಬೇಗ ಹರಡಲು ಕಾರಣ. ವಿದ್ಯಾರ್ಥಿಗಳು ಕೋವಿಡ್ ಸುರಕ್ಷತಾ ಕ್ರಮ ಪಾಲಿಸುವುದಿಲ್ಲ. ಪರೀಕ್ಷೆ ನಂತರ ಪಾರ್ಟಿ ಮಾಡುವುದು, ಸುತ್ತುವುದು ಕೂಡ ಕಾರಣ ಇರಬಹುದು. ಈಗ ಎಲ್ಲ ಮುನ್ನಚ್ಚರಿಕೆ ವಹಿಸಲಾಗಿದೆ ಎಂದರು.

ರಾಜ್ಯದಲ್ಲಿ ಪಾಸಿಟಿವಿಟಿ ದರ ಹೆಚ್ಚಿದೆಯೇ ಹೊರತು ಮರಣ ದರ ಹೆಚ್ಚಿಲ್ಲ. ಮುಖ್ಯಮಂತ್ರಿಗಳು ಅವಲೋಕಿಸಿ ಎಲ್ಲ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

   ಏಪ್ರಿಲ್ 7ರಿಂದ ಕರ್ನಾಟಕದಾದ್ಯಂತ ಬಸ್ ಸಂಚಾರ ಸ್ಥಗಿತ-ಸರ್ಕಾರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ | Oneindia Kannada

   ಮಣಿಪಾಲ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 145 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾದ ನಂತರ 5,800 ವಿದ್ಯಾರ್ಥಿಗಳು ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಕೊರೊನಾ 2ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುಧೀರ್ ಚಂದ್ರಸೂಡಾ ಇತ್ತೀಚೆಗೆ ಮಾಹಿತಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

   English summary
   Health minister Dr Sudhakar today(March 30) inspected the Manipal Institute of Technology in Udupi which is declared as a containment zone due to surge in cases in the campus.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X