• search
For udupi Updates
Allow Notification  

  ಶಾಸಕರಿಂದ ರಾಷ್ಟ್ರಧ್ವಜಕ್ಕೆ ಅವಮಾನ, ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

  |

  ಉಡುಪಿ, ಆಗಸ್ಟ್ 16: ಶಾಸಕರೇ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಈ ಕುರಿತ ಫೋಟೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.

  ಉಡುಪಿಯ ಉದ್ಯಾವರ ಫ್ರೆಂಡ್ಸ್ ಸರ್ಕಲ್ ತನ್ನ ವಾರ್ಷಿಕೋತ್ಸವ ಮತ್ತು ಸ್ವಾತಂತ್ರ್ಯೋತ್ಸವದ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ನಡೆಸಿತ್ತು. ಈ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು .

  Minister Vinay Kumar Sorake insults National flag at Udupi

  ಇದರಲ್ಲಿ ಸ್ಥಳೀಯ ಶಾಸಕ ಹಾಗೂ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಅತಿಥಿಗಳ ಕಾಲ ಬಳಿಯೇ ಇಡಲಾಗಿದ್ದ ಟಿಪಾಯಿ ಗೆ ರಾಷ್ಟ್ರಧ್ವಜವನ್ನು ಅಳವಡಿಸಿ ಭಾರಿ ಪ್ರಮಾದ ಎಸಗಲಾಗಿತ್ತು . ರಾಷ್ಟ್ರಧ್ವಜವನ್ನು ಕಾಲ ಬುಡದಲ್ಲಿ ಅಳವಡಿಸಿರುವುದನ್ನು ಶಾಸಕ ವಿನಯ ಕುಮಾರ್ ಸೊರಕೆ ನೋಡಿಯೂ ನೋಡದಂತೆ ವರ್ತಿಸಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ .

  ರಾಷ್ಟ್ರಧ್ವಜದ ನೀತಿ ಸಂಹಿತೆ ಪ್ರಕಾರ ಕಾರ್ಯಕ್ರಮದ ವೇದಿಕೆಯ ಮೇಲೆ ರಾಷ್ಟ್ರಧ್ವಜವನ್ನು ಬಳಸುವಂತಿಲ್ಲ. ಬಳಸಿದರೂ ಕಾರ್ಯಕ್ರಮದ ವೇದಿಕೆಯ ಮೇಲಿರುವ ಅಧ್ಯಕ್ಷರ ಸ್ಥಾನಕ್ಕೆ ಎತ್ತರದಲ್ಲಿ ರಾಷ್ಟ್ರಧ್ವಜ ಹಾರಾಡತಕ್ಕದ್ದು ಎನ್ನುವ ನಿಯಮವಿದೆ .

  ಆದರೆ ಈ ಕಾರ್ಯಕ್ರಮದಲ್ಲಿ ವೇದಿಕೆಯ ಅತಿಥಿಗಳ ಕಾಲ ಬಳಿ ಇರುವ ಟಿಪಾಯಿ ಗೆ ರಾಷ್ಟ್ರಧ್ವಜ ಅಳವಡಿಸಿ ಅಗೌರವ ತೋರಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯೊಬ್ಬಳು ವಿದ್ಯಾರ್ಥಿ ವೇತನ ಸ್ವೀಕರಿಸುತ್ತಾ ರಾಷ್ಟ್ರಧ್ವಜವನ್ನು ಮೆಟ್ಟಿರುವುದು ಗೋಚರಿಸುತ್ತಿದೆ . ಇದು ಕ್ಯಾಮೆರಾ ಕಣ್ಣಿನಲ್ಲಿ ಸೆರಿಯಾಗಿದ್ದು ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

  ಸಾಮಾಜಿಕ ಜಾಲತಾಣದಲ್ಲಿ ಶಾಸಕರು ಹಾಗೂ ಕಾರ್ಯಕ್ರಮ ಸಂಘಟಕರ ವಿರುದ್ಧ ಭಾರೀ ಆಕ್ರೋಶ ಟೀಕೆಗಳು ವ್ಯಕ್ತವಾಗುತ್ತಿವೆ . ರಾಷ್ಟ್ರಧ್ವಜಕ್ಕೆ ಅಗೌರವ ತೋರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೂಡ ಕೇಳಿಬರುತ್ತಿದೆ.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  ಇನ್ನಷ್ಟು ಉಡುಪಿ ಸುದ್ದಿಗಳುView All

  English summary
  Minister Vinay Kumar Sorake insults national flag at Udupi at a private students scholorship function. The picture is now viral on social media with much of negetive comments.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more