Get Updates
Get notified of breaking news, exclusive insights, and must-see stories!

ಜಾತಿಯ ಕಾರಣಕ್ಕೆ ನನಗೆ ಟಿಕೆಟ್ ತಪ್ಪಿದೆ- ಕಣ್ಣೀರಿಟ್ಟ ರಘುಪತಿ ಭಟ್‌

ಉಡುಪಿ, ಏಪ್ರಿಲ್‌ 12: ಕರ್ನಾಟಕ ವಿಧಾನಸಭೆ ಚುನಾವಣೆಗೆ ನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ ಅಭ್ಯರ್ಥಿಗಳಿಗೆ ಬಿಜೆಪಿ ಹೈಕಮಾಂಡ್‌ ಟಿಕೆಟ್ ಘೋಷಣೆ ಮಾಡಿದೆ. ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು 52 ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್​ ನೀಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಈ ಬಾರಿ ಉಡುಪಿ ಜಿಲ್ಲೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಹಾಲಿ ಶಾಸಕರಿಗೆ ಟಿಕೆಟ್‌ ಕೈ ತಪ್ಪಿದ್ದು, ಟಿಕೆಟ್‌ ಘೋಷಣೆಯಾದ ನಾಲ್ಕು ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳಲ್ಲಿ ಇತರ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಲಾಗಿದೆ. ಈ ಪೈಕಿ ಉಡುಪಿ ಹಾಲಿ ಶಾಸಕ ರಘುಪತಿ ಭಟ್‌ ಕೂಡ ಒಬ್ಬರು.

MLA Raghupathi Bhat Cried Infront Of Media For Not Getting Ticket

ಉಡುಪಿ ಹಾಲಿ ಶಾಸಕ ರಘುಪತಿ ಭಟ್‌ಗೆ ಈ ಬಾರಿ ಬಿಜೆಪಿ ಟಿಕೆಟ್‌ ಕೈ ತಪ್ಪಿದ್ದು, ಉಡುಪಿ ವಿಧಾನಸಭಾ ಕ್ಷೇತ್ರದಿಂದ ಯಶ್‌ಪಾಲ್‌ ಸುವರ್ಣಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬುಧವಾರ ಬೆಳ್ಳಂಬೆಳಗ್ಗೆ ರಘುಪತಿ ಭಟ್‌ ಬೆಂಬಲಿಗರು ಶಾಸಕರ ಮನೆಗೆ ದೌಡಾಯಿಸಿದ್ದಾರೆ.

ಟಿಕೆಟ್ ವಂಚಿತ ರಘುಪತಿ ಭಟ್ ಮನೆಗೆ ನೂರಾರು ಮಂದಿ ಅಭಿಮಾನಿಗಳು ಭೇಟಿ ನೀಡುತ್ತಿದ್ದು, ಅಭಿಮಾನಿಗಳನ್ನು ಕಂಡು ಘುಪತಿ ಭಟ್ ಭಾವುಕರಾಗಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಶಾಕ್‌ನಲ್ಲಿದ್ದೇನೆ ಸದ್ಯ ಏನು ಹೇಳುವ ಸ್ಥಿತಿಯಲಿಲ್ಲ ಎಂದ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದಾರೆ.

ಜಾತಿಯ ಕಾರಣಕ್ಕೆ ನನಗೆ ಟಿಕೆಟ್ ತಪ್ಪಿದೆ- ರಘುಪತಿ ಭಟ್‌ ಬೇಸರ

ಪಕ್ಷ ನನ್ನನ್ನು ನಡೆಸಿಕೊಂಡ ಬಗ್ಗೆ ತುಂಬಾ ಬೇಸರವಿದೆ. ಕನಿಷ್ಟ ಜಿಲ್ಲಾ ಮಟ್ಟದ ನಾಯಕರು ಕೂಡ ಕರೆ ಮಾಡಿ ಮಾತನಾಡಿಲ್ಲ. ಜಾತಿಯ ಕಾರಣಕ್ಕೆ ನನಗೆ ಟಿಕೆಟ್ ತಪ್ಪಿದೆ ಎನ್ನುವುದು ಖಚಿತವಾಗಿದೆ. ಏನು ಹೇಳದೆ ಕೊನೆಗಳಿಗೆಯಲ್ಲಿ ಅವಕಾಶ ವಂಚನೆ ಮಾಡಿದ್ದಾರೆ. ಟಿವಿ ನೋಡಿ ನನಗೆ ಟಿಕೆಟ್ ಇಲ್ಲ ಅಂತ ಗೊತ್ತಾಗಬೇಕಾ?. ಪಕ್ಷದ ನಾಯಕರು ನನ್ನನ್ನು ಈ ರೀತಿ ನಡೆಸಿಕೊಳ್ಳಬಾರದಿತ್ತು ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

MLA Raghupathi Bhat Cried Infront Of Media For Not Getting Ticket

ಮಾಧ್ಯಮಗಳ ಜೊತೆ ಮಾತು ಮುಂದುವರಿಸಿದ ಅವರು, ನಾನು ಯಾವುದೇ ನಿರ್ಧಾರವನ್ನು ಪ್ರಕಟಿಸುವ ಸ್ಥಿತಿಯಲ್ಲಿ ಇಲ್ಲ. ಬ್ರಾಹ್ಮಣ ಎಂಬ ಕಾರಣಕ್ಕೆ ನನಗೆ ಟಿಕೆಟ್ ಕೈ ತಪ್ಪಿದೆ. ಪಕ್ಷಕ್ಕೆ ನನ್ನ ಅಗತ್ಯವಿಲ್ಲ ಎಂದು ತೋರುತ್ತದೆ. ಟಿಕೆಟ್ ಪಡೆದ ಯಶ್ ಪಾಲ್ ಸುವರ್ಣ ನಾನು ಬೆಳೆಸಿದ ಹುಡುಗ. ಯಶ್ ಪಾಲ್ ಸುವರ್ಣಗೆ ಟಿಕೆಟ್ ನೀಡಿದ ಬಗ್ಗೆ ಸಂತೋಷವಿದೆ ಎಂದಿದ್ದಾರೆ.

ಆದರೆ ಬಿಜೆಪಿ ಟಿಕೆಟ್‌ ನೀಡಿರುವ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಉಡುಪಿ ಶಾಸಕ ರಘುಪತಿ ಭಟ್‌ ಬಿಜೆಪಿ ಪಕ್ಷದ ಪ್ರಚಾರಕ್ಕೆ ನನ್ನ ಅಗತ್ಯವಿಲ್ಲ ಎಂದು ಭಾವಿಸುತ್ತೇನೆ. ನನಗೆ ಈ ಶಾಕ್ ನಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಭಾವುಕರಾಗಿ ಮಾತನಾಡಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಟಿಕೆಟ್‌ ಹಂಚಿಕೆಯ ವಿವರ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಉಡುಪಿ ಜಿಲ್ಲೆಯ ನಾಲ್ಕು ಕ್ಷೇತ್ರಗೆ ಟಿಕೆಟ್‌ ಘೋಷಣೆಯಾಗಿದೆ. ಉಡುಪಿ ವಿಧಾನಸಭಾ ಕ್ಷೇತ್ರದಿಂದ ಯಶ್‌ ಪಾಲ್‌ ಸುವರ್ಣ, ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ವಿ. ಸುನೀಲ್‌ ಕುಮಾರ್‌, ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಕಿರಣ್‌ ಕುಮಾರ್‌ ಕೊಡ್ಗಿ ಹಾಗೂ ಕಾಪು ವಿಧಾನಸಭಾ ಕ್ಷೇತ್ರದಿಂದ ಗುರ್ಮೆ ಸುರೇಶ್‌ ಶೆಟ್ಟಿ ಅವರಿಗೆ ಬಿಜೆಪಿ ಸ್ಪರ್ಧಿಸಲು ಅವಕಾಶ ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+