• search
 • Live TV
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉಡುಪಿ ಶಾಸಕ ರಘುಪತಿ ಭಟ್ ಗೆ ಕೊರೊನಾ ಸೋಂಕು ದೃಢ

By ಉಡುಪಿ ಪ್ರತಿನಿಧಿ
|

ಉಡುಪಿ, ಅಕ್ಟೋಬರ್ 11: ಉಡುಪಿ ಕ್ಷೇತ್ರದ ಬಿಜೆಪಿ ಶಾಸಕ ರಘುಪತಿ ಭಟ್ ಅವರಿಗೆ ಕೊರೊನಾ ಸೋಂಕು ಪಾಸಿಟಿವ್ ಬಂದಿದ್ದು, ಶಾಸಕರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಜನರಿಗೆ ಕೊರೊನಾ ಸೋಂಕು ತಗುಲಿರುವ ಮಾಹಿತಿಯನ್ನು ನೀಡಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ನನ್ನ ಜೊತೆ ಸಂಪರ್ಕದಲ್ಲಿದ್ದವರು ಆದಷ್ಟು ಬೇಗ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಕಾಗೋಡು ತಿಮ್ಮಪ್ಪಗೆ ಕೋವಿಡ್ ಸೋಂಕು; ಆಸ್ಪತ್ರೆಗೆ ದಾಖಲು

ಶನಿವಾರ ಶಿವಮೊಗ್ಗದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಥಮ ಸಭೆ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಅವರು ಪಾಲ್ಗೊಂಡಿದ್ದರು ಎನ್ನಲಾಗಿದೆ.

ಜ್ವರ, ಮೈ-ಕೈ ನೋವು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿಕೊಂಡಿರುವ ಶಾಸಕ ರಘುಪತಿ ಭಟ್ ಅವರ ಕೊರೊನಾ ವರದಿ ಪಾಸಿಟಿವ್ ಬಂದಿದೆ.

   ಹಿಂದು ದೇವಸ್ಥಾನ ಹೊಡಿಯೋ ಅಂತ ಕೆಟ್ಟ ಮನಸ್ಸು ಯಾಕೆ?? | Oneindia Kannada

   ಕೊರೊನಾ ಚಿಕಿತ್ಸೆ ಪಡೆಯುತ್ತಿರುವ ಕಾರಣ ಕೆಲ ದಿನಗಳ ಕಾಲ ಸಾರ್ವಜನಿಕ ಸಂಪರ್ಕಕ್ಕೆ ಸಿಗಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕರು ಟ್ವೀಟ್ ಮಾಡಿದ್ದಾರೆ. ಶಿವಮೊಗ್ಗದ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಸಭೆಯಲ್ಲಿ ಪಾಲ್ಗೊಂಡವರು, ಹತ್ತಿರ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಶಾಸಕ ರಘುಪತಿ ಭಟ್ ಮನವಿ ಮಾಡಿದ್ದಾರೆ.

   English summary
   BJP MLA Raghupathi Bhat from Udupi constituency has been diagnosed with coronavirus and has been admitted to a private hospital.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X